ಇತರೆ
ನಿಧಾನವಾಗಿ ಚಲಿಸಿ ಎಂದಿದ್ದಕ್ಕೆ ಕಾರು ಗುದ್ದಿಸಿ ಯುವಕನ ಹತ್ಯೆ
Views: 31
ಕನ್ನಡ ಕರಾವಳಿ ಸುದ್ದಿ: ನಿಧಾನವಾಗಿ ಕಾರು ಓಡಿಸುವಂತೆ ತಿಳಿಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದ ಯುವಕನನ್ನು ಮನು (27) ಎಂದು ಗುರು ತಿಸಲಾಗಿದೆ. ನಡುರಾತ್ರಿ 12 ಗಂಟೆ ಸಮಯದಲ್ಲಿ ಮನು, ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ರಸ್ತೆ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದರು. ಈ ವೇಳೆ ಕೆಎ-01-ಎಂಎಫ್-2883 ನಂಬರ್‌ನ ಕಾರಿನಲ್ಲಿ ಅತಿ ವೇಗವಾಗಿ ಅಪರಿಚಿತ ವ್ಯಕ್ತಿ ಬಂದಿದ್ದಾನೆ. ಇದನ್ನು ಕಂಡ ಯುವಕರ ತಂಡ, ಕಾರು ಚಾಲಕನಿಗೆ ನಿಧಾನವಾಗಿ ಹೋಗು ಎಂದು ಹೇಳಿದ್ದರು. ಇದ ರಿಂದ ಕೋಪಗೊಂಡ ಕಾರು ಚಾಲಕ ಸ್ವಲ್ಪ ದೂರ ಹೋಗಿ ತಿರುಗಿಸಿಕೊಂಡು ಬಂದು, ಮಾತನಾಡುತ್ತ ನಿಂತಿದ್ದವರಿಗೆ ಡಿಕ್ಕಿ ಹೊಡೆಸಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಡಿಕ್ಕಿ ರಭಸಕ್ಕೆ ಮನು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.






