ಶಿಕ್ಷಣ

ತರಗತಿ ಕೋಣೆಯಲ್ಲಿ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ, ವಿಡಿಯೋ ವೈರಲ್!

Views: 112

ಕನ್ನಡ ಕರಾವಳಿ ಸುದ್ದಿ: ಶಿಕ್ಷಕಿಯೊಬ್ಬಳು ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡು ಶಾಲೆಯ ಕ್ಲಾಸ್ ರೂಂ ನಲ್ಲಿಯೇ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಮುಖ್ಯೋಪಾಧ್ಯಾಯಿನಿ ಮಧು ರೈ ಎಂಬುವವರು ಕ್ಲಾಸ್ ರೂಂ ನಲ್ಲಿಯೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಶಿಕ್ಷಕಿ ಮಧು ರೈ ತರಗತಿಯ ನೆಲದ ಮೇಲೆ ಮಲಗಿದ್ದು, ಸುತ್ತ ಇರುವ ಪುಟ್ಟ ವಿದ್ಯಾರ್ಥಿನಿಯರು ಶಿಕ್ಷಕಿಯ ಕಾಲುಗಳನ್ನು ಒತ್ತುತ್ತಿರುವ, ಬೆನ್ನು ಒತ್ತುತ್ತಿರುವ ವೈರಲ್ ಆಗಿದೆ. ಶಾಲೆಯಲ್ಲಿ ವಿದ್ಯೆ, ಜ್ಞಾನ ಕಲಿಸಬೇಕಾದ ಶಿಕ್ಷಕಿಯೇ ವಿದ್ಯಾರ್ಥಿಗಳಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವುದಕ್ಕೆ ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ, ಕೂಡಲೇ ತನಿಖೆಗೆ ಆದೇಶಿಸಿದೆ. ಚಿತ್ರಕೂಟದ ಜಿಲ್ಲಾ ಮೂಲ ಶಿಕ್ಷಣಾಧಿಕಾರಿಗಳು ಮುಖ್ಯೋಪಾಧ್ಯಾಯಿನಿಯನ್ನು ಅಮಾನತುಗೊಳಿಸಲು ಮುಂದಾಗಿದ್ದಾರೆ.

Related Articles

Back to top button
error: Content is protected !!