ಕಿರಿಮಂಜೇಶ್ವರ: ಜನತಾ ಆಂಗ್ಲ ಮಾಧ್ಯಮ ಶಾಲೆಯ ಯುಕೆಜಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭ
Views: 7
ಕನ್ನಡ ಕರಾವಳಿ ಸುದ್ದಿ: ಕಿರಿಮಂಜೇಶ್ವರ ಜನತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರಧಾನ ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಂತಾರಾಷ್ಟ್ರೀಯ ಮಟ್ಟದ ಜಾದೂಗಾರರಾದ ಸತೀಶ ಹೆಮ್ಮಾಡಿಯವರು ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯ ಉಜ್ವಲವಾಗಲು ಶಿಕ್ಷಕರ ಜೊತೆಗೆ ಪೋಷಕರು ಕೈಜೋಡಿಸಬೇಕು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ವಿಪುಲ ಅವಕಾಶಗಳನ್ನು ಒದಗಿಸುತ್ತಿರುವ ಈ ಸಂಸ್ಥೆಯ ಬಗ್ಗೆ ಹೆಮ್ಮೆಯೆನಿಸುತ್ತದೆ ಎಂದರು.
ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರ ಅವರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಕರಾವಳಿ ಭಾಗದಲ್ಲಿ ಗುಣಮಟ್ಟದ ಶಿಕ್ಷಣವನ್ನು ತಳಮಟ್ಟದಿಂದಲೇ ವಿದ್ಯಾರ್ಥಿಗಳಿಗೆ ನೀಡುವ ಉದ್ದೇಶದಿಂದಾಗಿ ಈ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿದ್ದು, ವಿದ್ಯಾರ್ಥಿಗಳ ಕಲಿಕೆಯಲ್ಲಿ ಅಪಾರವಾದ ಬದಲಾವಣೆಯನ್ನು ಕಂಡುಕೊಂಡಿದ್ದೇವೆ.ಚಿಕ್ಕ ವಯಸ್ಸಿನಲ್ಲಿರುವ ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ಪುರಸ್ಕಾರಗಳನ್ನು ನೀಡಿದಾಗ ಅವರಲ್ಲಿ ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡುವ ಹಂಬಲ ಮೂಡುತ್ತದೆ ಎಂದರು.
ಸಮರ್ಪಣಾ ಎಜ್ಯುಕೇಶನ್ ಟ್ರಸ್ಟ್ ಹಾಗೂ ಜನತಾ ಸಮೂಹ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಶ್ಯಾಮಲಾ ಗಣೇಶ್ ಅವರು ಪೋಷಕರ ಸಹಕಾರವಿದ್ದಾಗ ಶಿಕ್ಷಣವೆನ್ನುವ ಸುದೀರ್ಘ ಪ್ರಯಾಣವನ್ನು ಸುಲಭವಾಗಿ ಸಾಗಿಸಬಹುದು.ಹಾಗೆಯೇ ಈ ಸಂಸ್ಥೆಯ ಮೇಲೆ ಪೋಷಕರು ಹೊಂದಿರುವ ನಂಬಿಕೆ, ಬೆಂಬಲಕ್ಕೆ ಧನ್ಯವಾದವನ್ನು ತಿಳಿಸುತ್ತಾ ಮಕ್ಕಳ ಭವಿಷ್ಯ ಉಜ್ವಲವಾಗಿ ಬೆಳಗುವಂತಾಗಲಿ ಎಂದು ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಯುಕೆಜಿಯ ಎಲ್ಲಾ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉದಯ್ ನಾಯ್ಕ,ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಣ ಮಾರ್ಗದರ್ಶಕರಾಗಿರುವ ಅಭಿಲಾಷ್ ಕ್ಷತ್ರಿಯ, ಸಂಯೋಜಕರಾಗಿರುವ ಸುಬ್ರಮಣ್ಯ ಮರಾಟಿ, ಪೋಷಕರು, ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಸಮಾರಂಭದ ಪ್ರಯುಕ್ತ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಅಂತಾರಾಷ್ಟ್ರೀಯ ಮಟ್ಟದ ಜಾದುಗಾರರಾದ ಸತೀಶ ಹೆಮ್ಮಾಡಿ ಅವರಿಂದ ಜಾದೂ ಪ್ರದರ್ಶನ ನಡೆಯಿತು.
ಸಹಶಿಕ್ಷಕಿಯರಾಗಿರುವ ನಯಾಝ ಉನ್ನಿಸಾ ಸ್ವಾಗತಿಸಿ, ನೇತ್ರಾವತಿ ವಂದಿಸಿ, ಫಿಲೋಮಿನಾ ಓಲಿವೆರಾ ನಿರೂಪಿಸಿದರು.






