ಆರೋಗ್ಯ

ಕಣ್ಣು ಆಪರೇಷನ್‌ಗೆ ಲಂಚಕ್ಕೆ ಬೇಡಿಕೆ ಇಟ್ಟ ನೇತ್ರ ತಜ್ಞೆ ಲೋಕಾಯುಕ್ತ ಬಲೆಗೆ

Views: 55

ಕನ್ನಡ ಕರಾವಳಿ ಸುದ್ದಿ: ಕಣ್ಣಿನ ಚಿಕಿತ್ಸೆಗಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಜಿಲ್ಲಾಸ್ಪತ್ರೆಯಲ್ಲಿ ನೇತ್ರ ಚಿಕಿತ್ಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸವಿತಾ ಅವರನ್ನು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನಡೆದ ಲಂಚ ಪ್ರಕರಣ ಚರ್ಚೆಗೆ ಕಾರಣವಾಗಿದೆ. ತುಮಕೂರಿನ ಉಪ್ಪಾರಹಳ್ಳಿಯ ನಿವಾಸಿ ಅವಿನಾಶ್ ಅವರ ತಾಯಿಗೆ ಕಣ್ಣಿಗೆ ಲೆನ್ಸ್ ಹಾಕುವ ಚಿಕಿತ್ಸೆಗೆ ವೈದ್ಯೆ 6 ಸಾವಿರ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅಸಮಾಧಾನಗೊಂಡ ಅವಿನಾಶ್ ಲೋಕಾಯುಕ್ತಕ್ಕೆ ದೂರು ನೀಡಿದ ನಂತರ ಅಧಿಕಾರಿಗಳು ಕ್ರಮ ಕೈಕೈಗೊಂಡಿದ್ದಾರೆ.

ಮಧ್ಯಾಹ್ನ ಸಮಯದಲ್ಲಿ ಆಸ್ಪತ್ರೆಯ ಸಿಬ್ಬಂದಿ ಮನೋಜ್ ಮೂಲಕ ಹಣ ಸ್ವೀಕರಿಸುವ ವೇಳೆ ಅಧಿಕಾರಿಗಳು ದಾಳಿ ನಡೆಸಿ ಡಾ. ಸವಿತಾ ಅವರನ್ನು ರೆಡ್‌ ಹ್ಯಾಂಡ್ ಆಗಿ ಹಿಡಿದರು. ಲೋಕಾಯುಕ್ತ ಡಿವೈಎಸ್‌ಪಿ ಮಂಜುನಾಥ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಸದ್ಯ ಡಾ. ಸವಿತಾ ಮತ್ತು ಸಿಬ್ಬಂದಿ ಮನೋಜ್ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

Related Articles

Back to top button
error: Content is protected !!