ಶಿಕ್ಷಣ
ಕೋಟೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜು:ಎಂ.ಕಾಂ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್
Views: 37
ಕನ್ನಡ ಕರಾವಳಿ ಸುದ್ದಿ: ಕೋಟೇಶ್ವರ ಶ್ರೀಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎಂ.ಕಾಂ ವಿದ್ಯಾರ್ಥಿನಿ ರಚನಾ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2024-25 ನೇ ಸಾಲಿನ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಗಳಿಸಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ಇವರು ಜಪ್ತಿಯ ರಾಜೀವ ಶೆಟ್ಟಿ ಮತ್ತು ರತ್ನಾವತಿ ದಂಪತಿಯ ಸುಪುತ್ರಿಯಾಗಿದ್ದು, ಪ್ರಸ್ತುತ ಸರಕಾರಿ ಪ್ರಥಮ ದರ್ಜೆ ಕಾಲೇಜು ತೀರ್ಥಹಳ್ಳಿ ಇಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿನಿಯ ಶೈಕ್ಷಣಿಕ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ, ಎಲ್ಲ ಬೋಧಕ-ಬೋಧಕೇತರ ವರ್ಗ, ಸಮಸ್ತ ವಿದ್ಯಾರ್ಥಿಗಳು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಪೋಷಕ ಸಂಘದವರು, ಹಳೆ ವಿದ್ಯಾರ್ಥಿಗಳು ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.






