ಇತರೆ

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ: ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್

Views: 137

ಕನ್ನಡ ಕರಾವಳಿ ಸುದ್ದಿ: 13 ವರ್ಷಗಳ ಹಿಂದೆ ಮಹಡಿಯಿಂದ ಬಿದ್ದು ಮೆದುಳಿಗೆ ತೀವ್ರ ಗಾಯಗಳಾಗಿ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ರೋಗಿಯ ಆರೋಗ್ಯ ಸ್ಥಿತಿಯ ಕುರಿತು ಎರಡು ವೈದ್ಯಕೀಯ ಮಂಡಳಿಗಳ ಅಭಿಪ್ರಾಯಗಳನ್ನು ಪರಿಗಣಿಸಿ ತೀರ್ಪು ಪ್ರಕಟಿಸಿದೆ. ನ್ಯಾಯಾಲಯವು ತನ್ನ ಮಾರ್ಗಸೂಚಿಗಳ ಅಡಿಯಲ್ಲಿ ನಿಷ್ಕ್ರಿಯ ದಯಾಮರಣವನ್ನು ಅನುಮತಿಸಿದ ಮೊದಲ ಪ್ರಕರಣ ಇದಾಗಿದೆ.

ಪಂಜಾಬ್ ವಿಶ್ವವಿದ್ಯಾಲಯದ 31 ವರ್ಷದ ವಿದ್ಯಾರ್ಥಿ ಹರೀಶ್ ರಾಣಾ 2013 ರಲ್ಲಿ ಪೇಯಿಂಗ್ ಗೆಸ್ಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಈ ದುರಂತದಿಂದಾಗಿ ಆತನ ಮೆದುಳಿಗೆ ಗಾಯವಾಗಿ, ಆತ 100% ಕ್ವಾಡ್ರಾಫೆಜಿಯಾದಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದರು. ಬರೋಬ್ಬರಿ 13 ವರ್ಷಗಳಿಂದ ಈತನ ಸ್ಥಿತಿಯಲ್ಲಿ ಯಾವುದೇ ಸುಧಾರಣೆಗಳು ಕಾಣದೆ ಇದ್ದು, ಶಸ್ತ್ರಚಿಕಿತ್ಸೆಯ ಮೂಲಕ ಸ್ಥಾಪಿಸಲಾದ PEG ಟ್ಯೂಬ್‌ಗಳ ಮೂಲಕ ನೀಡಲಾಗುವ ಕ್ಲಿನಿಕಲಿ ಅಡ್ಮಿನಿಸ್ಟರಿಡ್ ನ್ಯೂಟ್ರಿಷನ್ (CAN) ನಿಂದ ಮಾತ್ರ ಆತನ ಜೀವ ಉಳಿದಿದೆ ಎಂದು ಪೋಷಕರು ತಿಳಿಸಿದ್ದಾರೆ.

ಇದರಿಂದಾಗಿ ಪೋಷಕರು 2024ರಲ್ಲಿ ದೆಹಲಿ ಹೈಕೋರ್ಟ್‌ಗೆ ಹೋಗಿ ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಕೋರಿದರು. ಅರ್ಜಿದಾರರು ಮಾರಕ ಅನಾರೋಗ್ಯದಿಂದ ಬಳಲುತ್ತಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತ್ತು. ಹಾಗಾಗಿ ಪೋಷಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

2018 ರ ಸುಪ್ರೀಂ ಕೋರ್ಟ್ ತೀರ್ಪಿನ ಹಲವಾರು ಅಂಶಗಳನ್ನು ಸ್ಪಷ್ಟಪಡಿಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರ ಭಾವನಾತ್ಮಕ ಪೀಠವು ಈ ತೀರ್ಪು ನೀಡಿದೆ. ಅಂತಹ ಸಂದರ್ಭಗಳಲ್ಲಿ ಪ್ರಮುಖ ಪ್ರಶ್ನೆ ಎದುರಾಗುವುದು ಸಾವು ರೋಗಿಯ ಹಿತಾಸಕ್ತಿಯಲ್ಲಿದೆಯೇ ಎಂಬುದು ಅಲ್ಲ ಆದರೆ ಜೀವ ಉಳಿಸುವ ಚಿಕಿತ್ಸೆಯನ್ನು ಮುಂದುವರಿಸುವುದು ರೋಗಿಯ ಹಿತಾಸಕ್ತಿಯನ್ನು ಪೂರೈಸುತ್ತದೆಯೇ ಎಂಬುದಾಗಿ ಅಭಿಪ್ರಾಯಪಟ್ಟಿರುವ ಪೀಠ ರಾಣಾ ಅವರ ಪೋಷಕರು ವೈದ್ಯಕೀಯ ಬೆಂಬಲವನ್ನು ಹಿಂಪಡೆಯಲು ಅನುಮತಿ ನೀಡಿತು.

Related Articles

Back to top button
error: Content is protected !!