ಇತರೆ

ಮದುವೆ ಸಮಾರಂಭದಲ್ಲಿ ಬುರ್ಖಾ ಧರಿಸಿ ಆಭರಣ ಕದಿಯುತ್ತಿದ್ದ ಮಹಿಳೆ ಬಂಧನ

Views: 40

ಕನ್ನಡ ಕರಾವಳಿ ಸುದ್ದಿ: ಮದುವೆ ಸಮಾರಂಭಗಳಲ್ಲಿ ಸಂಚಲನ ಮೂಡಿಸಿದ್ದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.

ಬುರ್ಖಾ ಧರಿಸಿ, ವ್ಯಾನಿಟಿ ಬ್ಯಾಗ್ ಹಿಡಿದು  ಚಿನ್ನಾಭರಣ ಎಗರಿಸುತ್ತಿದ್ದ ರುಕ್ಸಾರ್ ಫಿರ್ದೋಸ್(30) ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಪ್ರಸಿದ್ಧ ‘ಶಾದಿ ಮಹಲ್’ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕಳ್ಳತನ ವರದಿಯಾಗುತ್ತಿದ್ದು, ಮದುವೆಗೆ ಬಂದವರು ತಮ್ಮ ಆಭರಣಗಳನ್ನು ಬ್ಯಾಗ್‌ನಲ್ಲಿ ಇಡುವುದನ್ನೇ ಸಂಚು ಹೂಡಿ ಕಾಯುತ್ತಿದ್ದ ಈ ಮಹಿಳೆ, ಕ್ಷಣಾರ್ಧದಲ್ಲಿ ಅವುಗಳನ್ನು ಎಗರಿಸಿ ಪರಾರಿಯಾಗುತ್ತಿದ್ದಳು.

ಕಳೆದ ಒಂದು ತಿಂಗಳ ಹಿಂದೆ ನಡೆದ ಮದುವೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಹಗಲಿರುಳು ಪರಿಶೀಲಿಸಿದಾಗ, ಆಕೆಯ ಕೈಯಲ್ಲಿದ್ದ ವಿಶಿಷ್ಟವಾದ ವ್ಯಾನಿಟಿ ಬ್ಯಾಗ್‌ ಕಳ್ಳಿಯನ್ನು ಪತ್ತೆಹಚ್ಚಲು ಪ್ರಮುಖ ಸುಳಿವು ನೀಡಿತು.

ಇನ್ನು ಬಂಧಿತವಾಗಿರುವ ಕಳ್ಳಿ ರುಕ್ಸಾರ್ 18 ಲಕ್ಷ ರೂ ಮೌಲ್ಯದ ಒಟ್ಟು 120 ಗ್ರಾಂ ಚಿನ್ನಾಭರಣ ಕದ್ದಿದ್ದಾಳೆ. ಈಕೆಯ ಬಂಧನದಿಂದ 4 ಪ್ರಮುಖ ಕಳ್ಳತನ ಪ್ರಕರಣ ಪತ್ತೆಯಾಗಿವೆ. ವಿಚಾರಣೆ ವೇಳೆ ಆಘಾತಕಾರಿ ವಿಷಯವೊಂದು ಬೆಳಕಿಗೆ ಬಂದಿದೆ.

ಈ ಹಿಂದೆ ಕೆಲವು ಮದುವೆ ಮನೆಗಳಲ್ಲಿ ಕಳ್ಳತನ ಮಾಡುವಾಗ ಈಕೆ ಸ್ಥಳೀಯರಿಗೆ ಸಿಕ್ಕಿಬಿದ್ದಿದ್ದಳು. ಆದರೆ, ಮಹಿಳೆಯೆಂದು ಅನುಕಂಪ ತೋರಿಸಿದ ಜನರು ವಾರ್ನಿಂಗ್ ಮಾಡಿ ಬಿಟ್ಟು ಕಳಿಸಿದ್ದರು. ಇದನ್ನೇ ಲಾಭವನ್ನಾಗಿ ಮಾಡಿಕೊಂಡ ಈ ಕಿಲಾಡಿ ಕಳ್ಳಿ, ತನ್ನ ಕಳ್ಳತನದ ಕಾಯಕವನ್ನು ಮುಂದುವರಿಸಿ ಐಷಾರಾಮಿ ಜೀವನ ನಡೆಸುತ್ತಿದ್ದಳು.

Related Articles

Back to top button
error: Content is protected !!