ಅನುಷ್ಕಾ ಶೆಟ್ಟಿ 44ನೇ ವರ್ಷಕ್ಕೆ ಉದ್ಯಮಿಯೊಂದಿಗೆ ಸಪ್ತಪದಿ?
Views: 61
ಕನ್ನಡ ಕರಾವಳಿ ಸುದ್ದಿ: ಸ್ಟಾರ್ ನಟಿ, ಕನ್ನಡತಿ ಅನುಷ್ಕಾ ಶೆಟ್ಟಿಯ ಮದುವೆ ವಿಚಾರ ಆಗಿಂದಾಗೆ ಮುನ್ನಲೆಗೆ ಬಂದು, ಮತ್ತೆ ಮರೆಯಾಗ್ತಿತ್ತು. ಆದ್ರೀಗ ಅನುಷ್ಕಾ ಶೆಟ್ಟಿ ಮದುವೆ ವಿಚಾರ ಜೋರಾಗಿ ಕೇಳಿ ಬರ್ತಿದೆ.
ಇದೇ ವರ್ಷ ಅನುಷ್ಕಾ ಶೆಟ್ಟಿ ಸಪ್ತಪದಿ ತುಳಿಯಲಿದ್ದಾರಂತೆ. ಅನುಷ್ಕಾ ಕೈ ಹಿಡಿಯಲಿರೋ ಹುಡುಗ ಉದ್ಯಮಿಯಾಗಿದ್ದು, ಅನುಷ್ಕಾ ಶೆಟ್ಟಿ ಕುಟುಂಬಕ್ಕೆ ತುಂಬಾ ಆಪ್ತರು ಎನ್ನಲಾಗ್ತಿದೆ. ಈ ವಿಚಾರ ಅನುಷ್ಕಾ ಅಭಿಮಾನಿಗಳಲ್ಲಿ ಖುಷಿ ತಂದಿದೆಯಾದ್ರೂ, ಪ್ರಭಾಸ್ ಜೊತೆಗಿನ ಮದುವೆ ವಿಚಾರ ಸುಳ್ಳಾಯ್ತಲ್ಲ ಎನ್ನುವ ಬೇಸರವೂ ಅಭಿಮಾನಿಗಳಲ್ಲಿದೆ.
ದಕ್ಷಿಣ ಭಾರತದ ಖ್ಯಾತ ನಟಿ, ‘ದೇವಸೇನಾ’ ಖ್ಯಾತಿಯ ಅನುಷ್ಕಾ ಶೆಟ್ಟಿಯವರ ಮದುವೆ ವಿಚಾರ ಇದೀಗ ಮತ್ತೆ ಸದ್ದು ಮಾಡುತ್ತಿದೆ. ಕಳೆದ ಹಲವು ವರ್ಷಗಳಿಂದ ಅಭಿಮಾನಿಗಳಲ್ಲಿ ಕುತೂಹಲಕ್ಕೀಡು ಮಾಡಿದ್ದ ವಿಷಯಕ್ಕೆ ಈಗ ಅಂತ್ಯ ಸಿಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ ಎನ್ನಲಾಗುತ್ತಿದೆ.
ಕೆಲವು ಮೂಲಗಳ ಪ್ರಕಾರ, ಅನುಷ್ಕಾ ಶೆಟ್ಟಿ ಅವರು ಇದೇ ವರ್ಷ ತಮ್ಮ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಅವರು ಕೈಹಿಡಿಯಲಿರುವ ಹುಡುಗ ಚಿತ್ರರಂಗ ಹಿನ್ನಲೆಯುಳ್ಳವರಲ್ಲ, ಬದಲಾಗಿ ಒಬ್ಬ ಯಶಸ್ವಿ ಉದ್ಯಮಿಯಾಗಿದ್ದಾರೆ. ವಿಶೇಷವೆಂದರೆ, ಈತ ಅನುಷ್ಕಾ ಅವರ ಆಪ್ತರು ಎನ್ನಲಾಗಿದ್ದು ಎರಡೂ ಕುಟುಂಬಗಳ ಒಪ್ಪಿಗೆಯ ಮೇರೆಗೆ ಈ ಮದುವೆ ನಿಶ್ಚಯವಾಗಿದೆ ಎಂದು ಹೇಳಲಾಗುತ್ತಿದೆ.
ಅನುಷ್ಕಾ ಶೆಟ್ಟಿ ಮತ್ತು ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಡುವೆ ಪ್ರೀತಿ ಇದೆ ಎಂಬ ವದಂತಿಗಳು ದಶಕಗಳಿಂದ ಕೇಳಿಬರುತ್ತಿದ್ದವು. ‘ಬಾಹುಬಲಿ’ ಜೋಡಿ ನಿಜ ಜೀವನದಲ್ಲೂ ಒಂದಾಗಲಿ ಎಂಬುದು ಕೋಟ್ಯಂತರ ಅಭಿಮಾನಿಗಳ ಅಭಿಲಾಷೆಯಾಗಿತ್ತು. ಆದರೆ ಈಗ ಅನುಷ್ಕಾ ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದ ಹಿನ್ನಲೆ ಪ್ರಭಾಸ್ ಅಭಿಮಾನಿಗಳಲ್ಲಿ ತುಸು ಬೇಸರ ಮೂಡಿದೆ. ಆದರೂ, ನೆಚ್ಚಿನ ನಟಿ ಹೊಸ ಜೀವನಕ್ಕೆ ಕಾಲಿಡುತ್ತಿರುವುದಕ್ಕೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.






