ಜನಮನ

ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ

Views: 19

ಕನ್ನಡ ಕರಾವಳಿ ಸುದ್ದಿ: ಕರ್ನಾಟಕದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್, ಎರಡೂ ಕ್ಷೇತ್ರಗಳ ಉಪಚುನಾವಣಾ ದಿನಾಂಕ ಪ್ರಕಟಿಸಿದರು.

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಮಾರ್ಚ್ 16ರಂದು ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ಮಾರ್ಚ್ 23ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಮಾರ್ಚ್ 24ರಂದು ಅಧಿಕಾರಿಗಳು ನಾಮಪತ್ರ ಪರಿಶೀಲನೆ ನಡೆಸಲಿದ್ದಾರೆ. ಮಾರ್ಚ್ 26 ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ.

ಏಪ್ರಿಲ್ 9ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.

ಹಿರಿಯ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರ ಮತ್ತು ಹಿರಿಯ ಕೈ ಶಾಸಕ ಎಚ್‌.ವೈ.ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ.

Related Articles

Back to top button
error: Content is protected !!