ಜನಮನ

ಕಟಪಾಡಿಯಲ್ಲಿ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆ; ಮುನ್ನೆಚ್ಚರಿಕಾ ಕ್ರಮವಾಗಿ ಸಂಚಾರಕ್ಕೆ ಬದಲಿ ಮಾರ್ಗ

Views: 52

ಕನ್ನಡ ಕರಾವಳಿ ಸುದ್ದಿ: ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಾಟದ ಟ್ಯಾಂಕರ್‌ ಮಗುಚಿ ಬಿದ್ದ ಘಟನೆ ನಡೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಡಳಿತ ಈ ಹೆದ್ದಾರಿಯಾಗಿ ಸಂಚರಿಸುವ ವಾಹನಗಳಿಗೆ ಬದಲಿ ಸಂಚಾರದ ವ್ಯವಸ್ಥೆ ಮಾಡಿದೆ.

ಟ್ಯಾಂಕರ್‌ನಲ್ಲಿದ್ದ ಗ್ಯಾಸ್ ಸೋರಿಕೆಯಾಗಿ ಆತಂಕ ಸೃಷ್ಟಿಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಈ ನಡುವೆ ಈ ಮಾರ್ಗವಾಗಿ ಹೋಗುವುದು ಅಸಾಧ್ಯವಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಬದಲಿ ಮಾರ್ಗದ ವ್ಯವಸ್ಥೆ ಮೂಲಕ ಸಂಚರಿಸಲು ಸೂಚಿಸಿದ್ದಾರೆ.

ಉಡುಪಿಯಿಂದ ಮಂಗಳೂರಿಗೆ ಹೋಗುವ ವಾಹನಗಳು ಮಣಿಪಾಲದಿಂದ ಮಣಿಪುರ- ಮೂಡುಬೆಳ್ಳೆ- ಶಿರ್ವ ಮಾರ್ಗವಾಗಿ ಕಾಪು ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ತೆರಳಬೇಕು ಅಥವಾ ಮಣಿಪಾಲದಿಂದ ಶಿರ್ವ- ಬೆಳ್ಳೆಣ್ ಮಾರ್ಗವಾಗಿ ಪಡುಬಿದ್ರೆ ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ಸಂಚರಿಸಲು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.

Related Articles

Back to top button
error: Content is protected !!