ಕುಂದಾಪುರ: ಮನೆ ಕಟ್ಟಲು ಸಾಲ ಸಿಗದಿದ್ದಕ್ಕೆ ಬಳ್ಕೂರಿನ ಯುವಕ ವಿಷ ಸೇವಿಸಿ ಆತ್ಮಹತ್ಯೆ
Views: 175
ಕನ್ನಡ ಕರಾವಳಿ ಸುದ್ದಿ: ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಸಿಗದಿದ್ದಕ್ಕೆ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.16 ರಂದು ಬಳ್ಕೂರಿನಲ್ಲಿ ಸಂಭವಿಸಿದೆ.
ಬಳ್ಕೂರು ಗ್ರಾಮದ ಭರತ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ
ಭರತ್ ಅವರು ತಮ್ಮ 10 ಸೆಂಟ್ಸ್ ಜಾಗದಲ್ಲಿ ಮನೆ ಕಟ್ಟುವ ಉದ್ದೇಶದಿಂದ ಬ್ಯಾಂಕ್ ಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಬ್ಯಾಂಕ್ ನವರು ಜಾಗದ ಮೇಲೆ ಸಾಲ ಕೊಡಲು ನಿರಾಕರಿಸಿದ್ದರು. ಇದರಿಂದ ಬೇಸರಗೊಂಡ ಭರತ್ ಮಾ.12 ರಂದು ಮಧ್ಯಾಹ್ನ ಮನೆಯಲ್ಲಿ ಕೀಟ ನಾಶಕ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ಅಸ್ವಸ್ಥಗೊಂಡ ಅವರನ್ನು ಕೂಡಲೇ ಕುಂದಾಪುರದ ಸರಕಾರಿ ಆಸ್ಪತ್ರೆಗೆ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾ.16 ರಂದು ಅಲ್ಲಿಂದ ಬಿಡುಗಡೆಗೊಂಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಶರತ್ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






