ಜನಮನ

ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವ, ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್‌ಗಳ ಸಂಘ

Views: 12

ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವದಿಂದ ಬೆಂಗಳೂರು ಹೋಟೆಲ್ ಉದ್ಯಮ ನಷ್ಟ ಅನುಭವಿಸುತ್ತಿದ್ದು, ಹಲವು ಹೋಟೆಲ್‌ಗಳು ಬಂದ್‌ ಆಗಿದ್ದರೆ, ಕೆಲವು ಮೆನು ಕಡಿತಗೊಳಿಸಿವೆ.

ಈ ಬಿಕ್ಕಟ್ಟಿಗೆ ಪರಿಹಾರ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, 40 ಸಾವಿರ ಹೋಟೆಲ್‌ಗಳು ಮತ್ತು 6 ಲಕ್ಷ ಕಾರ್ಮಿಕರ ಭವಿಷ್ಯ ಆತಂತ್ರವಾಗಿದ್ದು, ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದೆ.

ರಾಜ್ಯದಲ್ಲಿ ಕಮರ್ಷಿಯಲ್ ಸಿಲಿಂಡರ್‌ಗಳ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವುದರಿಂದ ಹೋಟೆಲ್ ಉದ್ಯಮ ನಷ್ಟವನ್ನು ಅನುಭವಿಸುತ್ತಿದ್ದು, ಈಗಾಗಲೇ ಹಲವು ಹೋಟೆಲ್‌ಗಳು ಬಂದ್ ಆಗಿದ್ದರೆ, ಇನ್ನೊಂದಿಷ್ಟು ಮೆನುವಿನಲ್ಲಿ ಭಾರೀ ಕಡಿತದ ಜತೆ ಗ್ರಾಹಕರಿಗೆ ಸೇವೆ ನೀಡುತ್ತಿವೆ. ಇದೇ ಸ್ಥಿತಿ ಮುಂದುವರಿದರೆ ಅವುಗಳೂ ಬಂದ್ ಆಗುವ ಆತಂಕ ಎದುರಾಗಿದೆ. ಈ ಬೆನ್ನಲ್ಲೇ ಬೆಂಗಳೂರು ಹೋಟೆಲ್ ಅಸೋಸಿಯೇಷನ್, ವಾಣಿಜ್ಯ ಬಳಕೆಯ ಸಿಲಿಂಡರ್ ಗಳಿಗಾಗಿ ಹೈಕೋರ್ಟ್ ಕದ ತಟ್ಟಿದೆ.

ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಸರಕಾರಿ ಸ್ವಾಮ್ಯದ ತೈಲ ಕಂಪನಿಗಳನ್ನು ಪ್ರತಿವಾದಿಯನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ. ಹೋಟೆಲ್ ಮುಚ್ಚಿರುವುದರಿಂದ ಹಾಲು ಮತ್ತು ತರಕಾರಿ ಮಾರಾಟಗಾರರಿಗೂ ತೊಂದರೆ ಆಗಿದೆ. 40 ಸಾವಿರ ಹೋಟೆಲ್, 6 ಲಕ್ಷ ಕಾರ್ಮಿಕರಿಗೆ ಸಮಸ್ಯೆಯಾಗಿದೆ. ಹೀಗಾಗಿ ಗ್ಯಾಸ್ ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಅಸೋಸಿಯೇಷನ್ ಪರ ವಕೀಲ ಕೆ.ಸತೀಶ್ ಭಟ್ ಅರ್ಜಿ ಸಲ್ಲಿಸಿದ್ದಾರೆ. ಹೋಟೆಲ್ ಉದ್ಯಮಕ್ಕೆ 1 ಸಾವಿರ ಸಿಲಿಂಡರ್‌ಗಳನ್ನು ಪೂರೈಸುವುದಾಗಿ ಸಚಿವ ಮುನಿಯಪ್ಪ ಹೇಳಿದ್ದರೂ, ಸಚಿವರ ಭರವಸೆ ಬಗ್ಗೆ ಬೆಂಗಳೂರಿನ ಹೋಟೆಲ್ ಮಾಲೀಕರು ಅಸಮಾಧಾನ ಹೊರಹಾಕಿದ್ದಾರೆ.

ಬೆಂಗಳೂರಿನಲ್ಲಿ ಸರಿ ಸುಮಾರು 40 ಸಾವಿರಕ್ಕೂ ಹೆಚ್ಚು ಹೋಟೆಲ್‌ಗಳಿದ್ದು, ಈ ಪೈಕಿ 4,500 ಹೋಟೆಲ್‌ಗಳು ರಿಜಿಸ್ಟರ್ ಆಗಿವೆ. ಇವೆಲ್ಲವೂ ಕೂಡ ಈಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಭಾವದ ಸಮಸ್ಯೆಗೆ ಸಿಲುಕಿದ್ದು, ನಷ್ಟ ಅನುಭವಿಸುತ್ತಿವೆ. ಹಲವೆಡೆ ರೆಸ್ಟೋರೆಂಟ್ ಗಳು ಬಂದ್ ಆಗಿದ್ದರೆ, ಇನ್ನು ಕೆಲ ಹೋಟೆಲ್‌ಗಳು ನಷ್ಟದಲ್ಲಿಯೇ ಗ್ರಾಹಕರಿಗೆ ಸೇವೆ ಒದಗಿಸುತ್ತಿರುವ ಪರಿಣಾಮ ರಾಜ್ಯ ಬೆಂಗಳೂರೊಂದರಲ್ಲೇ ನೂರಾರು ಕೋಟಿ ರು.ಹೋಟೆಲ್ ಉದ್ಯಮಕ್ಕೆ ನಷ್ಟ ಉಂಟಾಗಿದೆ ಎನ್ನಲಾಗಿದೆ.

ಸಾವಿರ ಹೋಟೆಲ್ಗಳಿಗೆ ಒಂದು ಸಾವಿರ ಸಿಲಿಂಡರ್ ಕೊಡುವ ಬದಲು, ಕೊಡದೆ ಇರುವುದೇ ಒಳ್ಳೆಯದು. ಹೋಟೆಲ್ಗಳ ಮಾಲಕರು ಮಾತ್ರವಲ್ಲದೆ ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಮತ್ತು ಅವರ ಕುಟುಂಬದ ಬಗ್ಗೆಯೂ ಸರಕಾರ ಗಮನ ಹರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

Related Articles

Back to top button
error: Content is protected !!