ಜನಮನ
ಕುಂದಾಪುರದಲ್ಲಿ ಉತ್ತಮ ಮಳೆ, ಮಾ.21ರವರೆಗೆ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
Views: 74
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ವಿವಿಧೆಡೆ ಬುಧವಾರ ಸಂಜೆ, ಗುರುವಾರ ಬೆಳಿಗ್ಗೆ ಗುಡುಗು, ಗಾಳಿ ಸಹಿತ ಉತ್ತಮ ಮಳೆಯಾಗಿದೆ.
ಸಿದ್ದಾಪುರ, ಹೊಸಂಗಡಿ, ಯಡಮೊಗೆ, ಹಳ್ಳಿಹೊಳೆ, ಆಜ್ರಿ, ಅಂಪಾರು, ಶಂಕರನಾರಾಯಣ, ಹಾಲಾಡಿ, ಬೆಳ್ವೆ, ಮಡಾಮಕ್ಕಿ, ಹೆಂಗವಳ್ಳಿ, ಅಮಾಸೆಬೈಲು, ಪರಿಸರದಲ್ಲಿ ಮತ್ತು ಗುರುವಾರ ಬೆಳಿಗ್ಗೆ ಬಿದ್ಕಲ್ ಕಟ್ಟೆ, ಹುಣ್ಸೆಮಕ್ಕಿ,ಕಾಳಾವರ, ವಕ್ವಾಡಿ ಸುತ್ತಮುತ್ತಲ ಪರಿಸರದಲ್ಲಿ ಮಳೆಯಾಗಿದೆ.
ಕರಾವಳಿಯಲ್ಲಿ ಮಳೆ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಪ್ರದೇಶಗಳಲ್ಲಿ ಮಾ. 21ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಬಿಸಿಲು, ಮೋಡದಿಂದ ಕೂಡಿದ ವಾತಾವರಣ ಇತ್ತು. ಬೆಳಗ್ಗೆ ಸಕೆಯಿಂದ ಕೂಡಿತ್ತು. 33.1 ಡಿ. ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.1 ಡಿ. ಸೆ. ಇಳಿಕೆ ಮತ್ತು 24.3 ಡಿ. ಸೆ. ಕನಿಷ್ಠ ತಾಪಮಾನ ದಾಖಲಾಗಿ 0.3 ಡಿ. ಸೆ. ಏರಿಕೆ ಕಂಡಿತ್ತು.






