ಇತರೆ
ಕೋತಿ ಮಾಡಿದ ಕಿತಾಪತಿಯಿಂದ ಓರ್ವ ವ್ಯಕ್ತಿ ದಾರುಣ ಸಾವು!
Views: 125
ಕನ್ನಡ ಕರಾವಳಿ ಸುದ್ದಿ: ಕೋತಿಯ ಕಿತಾಪತಿಯಿಂದ ಏಕಾಏಕಿ ಹಲವರ ಮೇಲೆ ಹೆಚ್ಚೇನು ದಾಳಿ ನಡೆಸಿದ್ದು, ಕಾರು ಶೋರೂಂ ಮೇಲ್ವಿಚಾರಕರಾಗಿದ್ದ ವಿಜಯ್ ಪ್ರಕಾಶ್(65) ಘಟನೆಯಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.
ಮಾರುತಿ ನಗರದ ಪಿಎನ್ ಟಿ ಕ್ವಾಟ್ರಸ್ ಬಳಿ ಮರದಲ್ಲಿದ್ದ ಹೆಚ್ಚೇನಿನ ಗೂಡಿನ ಮೇಲೆ ಮಂಗ ದಾಳಿ ನಡೆಸಿತ್ತು. ಈ ವೇಳೆ ಹೆಚ್ಚೇನುಗಳು ಚದುರಿದ್ದು, ಎಲ್ಲರ ಮೇಲೆ ದಾಳಿ ನಡೆಸಿದೆ. ಬೈಕ್ನಲ್ಲಿ ಬರುತ್ತಿದ್ದ ವಿಜಯ್ ಪ್ರಕಾಶ್ ಈ ದಾಳಿಯಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟಿದ್ದರು. ಶರ್ಟ್ ಬಿಚ್ಚಿ ಅವನ್ನು ಓಡಿಸಲು ಪ್ರಯತ್ನ ಮಾಡಿದ್ದರು. ಹೀಗಿದ್ದರೂ ಐವತ್ತಕ್ಕೂ ಅಧಿಕ ಜೇನು ನೊಣಗಳು ಅವರ ಮುಖ ಸೇರದಂತೆ ದೇಹದ ಹಲವು ಭಾಗಗಳ ಮೇಲೆ ದಾಳಿ ನಡೆಸಿದ್ದವು.
ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಪರಿಸ್ಥಿತಿ ಇನ್ನೂ ಮುಂದೆ ಯಾರಿಗೂ ಬಾರದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂಬ ಆಗ್ರಹವನ್ನು ವ್ಯಕ್ತಪಡಿಸಿದ್ದಾರೆ.






