ಇತರೆ

ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಟಿಟಿ ವಾಹನ ಪಲ್ಟಿ: ಓರ್ವ ಸಾವು,9 ಮಂದಿ ಗಂಭೀರ ಗಾಯ

Views: 73

ಕನ್ನಡ ಕರಾವಳಿ ಸುದ್ದಿ : ಬ್ರೇಕ್ ಫೈಲ್ ಆಗಿ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ ಒಂಬತ್ತು ಮಂದಿ ಗಂಭೀರ ಗಾಯವಾಗಿದ್ದು. ಓರ್ವ ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಮಾ.21 ರಂದು ಬೆಳಗ್ಗೆ ಘಟನೆ ನಡೆದಿದೆ.

ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ ಗಂಭೀರ ಗಾಯವಾಗಿದ್ದು. ಮಲೇನಹಳ್ಳಿ ನಿವಾಸಿ ಶೇಖರಪ್ಪ (59) ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!