ಶಿಕ್ಷಣ

ಕೋಟೇಶ್ವರ ಪದವಿ ಕಾಲೇಜಿಗೆ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಕಂಚಿನ ಪದಕ

Views: 18

ಕನ್ನಡ ಕರಾವಳಿ ಸುದ್ದಿ: ಭೋಪಾಲ್‌ನ ಎಸ್‌ಎಜಿಇ ವಿವಿಯಲ್ಲಿ ನಡೆದ ದಕ್ಷಿಣ-ಪಶ್ಚಿಮ ವಲಯ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿ ಭರತ್ ಬಸಪ್ಪ ಹೂಗಾರ್ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಆ ಮೂಲಕ ಅಸ್ಸಾಂನ ದಿಬ್ರುಗಢ ವಿವಿಯಲ್ಲಿ ನಡೆಯಲಿರುವ ಅಖಿಲ ಭಾರತ ಮಟ್ಟದ ಅಂತರ್ ವಿವಿ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಯ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ, ಎಲ್ಲ ಬೋಧಕ-ಬೋಧಕೇತರ ವರ್ಗ, ಸಮಸ್ತ ವಿದ್ಯಾರ್ಥಿಗಳು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಪೋಷಕ ಸಂಘದವರು, ಹಳೆ ವಿದ್ಯಾರ್ಥಿಗಳು ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.

Related Articles

Back to top button
error: Content is protected !!