BPL ಫಲಾನುಭವಿಗಳಿಗೆ ಗುಡ್ ನ್ಯೂಸ್..3 ಲಕ್ಷ ರೂ. ಆದಾಯ ಮಿತಿ ಶೀಘ್ರವೇ ಜಾರಿಯಾಗುವ ನಿರೀಕ್ಷೆ
Views: 54
ಕನ್ನಡ ಕರಾವಳಿ ಸುದ್ದಿ: ಬಡವರ ಬಿಪಿಎಲ್ ಕಾರ್ಡ್ ಈ ಮೊದಲು ವಾರ್ಷಿಕ ಆದಾಯ ಮಿತಿ ₹1.20 ಲಕ್ಷ ರೂಪಾಯಿ ಇತ್ತು. ಆದರೆ ಇಂದಿನ ಪರಿಸ್ಥಿತಿಯಲ್ಲಿ ಈ ಮಿತಿ ಸಾಕಾಗುವುದಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.
ಬಿಪಿಎಲ್ ಕಾರ್ಡ್ ಅರ್ಹತೆಗೆ ಆದಾಯ ಮಿತಿಯನ್ನು ₹3 ಲಕ್ಷಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಆಲೋಚಿಸುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಸುಮಾರು 4.5 ಕೋಟಿ ಬಿಪಿಎಲ್ ಕಾರ್ಡ್‌ದಾರರಿದ್ದಾರೆ. ಆದರೆ ಇವರಲ್ಲಿ ಸುಮಾರು 7.76 ಲಕ್ಷ ಕಾರ್ಡ್‌ದಾರರು ಬಿಪಿಎಲ್ ವ್ಯಾಪ್ತಿಗೆ ಸೇರಬಾರದು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ಇದಕ್ಕಾಗಿ ಪರಿಶೀಲನೆ ನಡೆಯುತ್ತಿದ್ದು, ಅರ್ಹರಲ್ಲದವರನ್ನು ಎಪಿಎಲ್ ಕಾರ್ಡ್‌ಗೆ ಪರಿವರ್ತಿಸಲಾಗುತ್ತಿದೆ ಈ ಪ್ರಕ್ರಿಯೆ ಈಗಾಗಲೇ ಸುಮಾರು 50% ಮುಗಿದಿದೆ. ಈ ಪರಿಶೀಲನೆ ಸಂಪೂರ್ಣವಾದ ನಂತರ ಹೊಸ ಬಿಪಿಎಲ್ ಕಾರ್ಡ್‌ಗಳನ್ನು ವಿತರಿಸಲಾಗುತ್ತದೆ.
ಇನ್ನೊಂದೆಡೆ, ಬಿಜೆಪಿ ನಾಯಕ ಸಿ.ಎನ್. ಅಶ್ವತ್ಥನಾರಾಯಣ ಅವರು ಈ ವಿಷಯವನ್ನು ಪ್ರಸ್ತಾಪಿಸಿ, ಪ್ರಸ್ತುತ ₹1.20 ಲಕ್ಷ ಆದಾಯ ಮಿತಿ ಇಂದಿನ ಪರಿಸ್ಥಿತಿಗೆ ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಕೂಡ ಆ ಅಭಿಪ್ರಾಯವನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ, ಆಡಳಿತ ಸುಧಾರಣಾ ಆಯೋಗವೂ ಆದಾಯ ಮಿತಿಯನ್ನು ₹3 ಲಕ್ಷಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಿದೆ ಎಂದು ತಿಳಿಸಿದ್ದಾರೆ.
ಶೀಘ್ರದಲ್ಲೇ ಈ ವಿಷಯದ ಕುರಿತು ಸಭೆ ನಡೆಯಲಿದೆ ಮುಂದಿನ 2 ತಿಂಗಳ ಒಳಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ






