ಇತರೆ
ಕುಂದಾಪುರ: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಸಾಬೀತು: ಪತಿಗೆ ಜೈಲು ಶಿಕ್ಷೆ
Views: 262
ಕನ್ನಡ ಕರಾವಳಿ ಸುದ್ದಿ: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದು, 10 ವರ್ಷಗಳ ನಂತರ ಇತ್ತೀಚೆಗಷ್ಟೇ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿ ಸಿದ್ದಾಪುರ ಗ್ರಾಮದ ಅಕ್ಕುಂಜೆಯ ಚಂದ್ರಪ್ರಕಾಶ್ ಪುತ್ರ ಶಶಿಕಾಂತ್ ಶೆಟ್ಟಿ (44) ವಿರುದ್ಧದ ಆರೋಪ ಸಾಬೀತಾಗಿದೆ.
ವರದಕ್ಷಿಣೆ ಕಿರುಕುಳಕ್ಕಾಗಿ ಆತನಿಗೆ ಕುಂದಾಪುರ ನ್ಯಾಯಾಲಯವು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ, ಆದೇಶಿಸಿದೆ.
ಆರೋಪಿಯನ್ನು ಮಾ.1 ರಂದು ಠಾಣಾ ಎಎಸ್ಐ ಶಂಕರ್ ಎಸ್ ಹಾಗೂ ಹೆಚ್ಸಿ 50ನೇ ಅಶೋಕ್ ಶೆಟ್ಟಿ ಅವರು ಪಶ್ಚಿಮ ಬಂಗಾಳ ರಾಜ್ಯದ ಮುರ್ಷಿದಾಬಾದ್ ಜಿಲ್ಲೆಯ ಬನಿನಾಥಪುರದಲ್ಲಿ ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ.ಪತ್ನಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.






