ಜನಮನ

ಮಿಂಚು ಗುಡುಗು ಸಹಿತ 3 ದಿನ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

Views: 37

ಕನ್ನಡ ಕರಾವಳಿ ಸುದ್ದಿ: ಮಾರ್ಚ್ 27ರಿಂದ ಮಳೆ ಬರುವ ಸಾಧ್ಯತೆ ಹೆಚ್ಚಾಗಿದ್ದು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ಇದೆ. ಎಪ್ರಿಲ್ ಮೊದಲ ವಾರದ ವರೆಗೆ ಮಳೆ ಮುಂದುವರಿಯುವ ಲಕ್ಷಣಗಳಿವೆ ಎನ್ನಲಾಗಿದೆ.

ಮೈಸೂರು, ಮಂಡ್ಯ, ಚಾಮರಾಜನಗರದಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲೂ, ಬಿಸಿಲ ಝಳ ಹೆಚ್ಚಿರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂಬ ಮುನ್ಸೂಚನೆಯಿದೆ.

ಕಳೆದೊಂದು ವಾರದಿಂದ ಭಾರತದ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದ ಬಿಸಿಲ ನಾಡು ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಕರ್ನಾಟಕದ ಮಲೆನಾಡು, ತೆಲಂಗಾಣ, ಆಂಧ್ರಪ್ರದೇಶ, ಛತ್ತೀಸ್‌ಗಢ, ವಿದರ್ಭ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಪಶ್ಚಿಮ ರಾಜಸ್ಥಾನ ಸೇರಿದಂತೆ ದೇಶದ 22 ರಾಜ್ಯಗಳಲ್ಲಿ ಶುಕ್ರವಾರ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ. ಜತೆಗೆ ಬಲವಾದ ಗಾಳಿ ಬೀಸಲಿದೆ. ಶನಿವಾರ ಕರಾವಳಿ ಕರ್ನಾಟಕ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ ಮತ್ತು ಈಶಾನ್ಯ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಭಾನುವಾರ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಆದರೆ, ವಾಯುವ್ಯ ಭಾರತದಲ್ಲಿ 2 ದಿನ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Related Articles

Back to top button
error: Content is protected !!