ಉಡುಪಿ ಜಿಲ್ಲೆಯ ಇಬ್ಬರು ಆರೋಪಿಗಳಿಗೆ ಗಡಿಪಾರು
Views: 84
ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯ ಇಬ್ಬರು ಆರೋಪಿಗಳಿಗೆ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ.
ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಮಾ.26ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಪ್ರಕರಣಗಳ ಹಿನ್ನೆಲೆ ಏನು?
ಶಿರ್ವ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ (ತಂದೆ: ಅಬ್ದುಲ್ ಖಾದರ್), ಸೂರ್ಯಗುಡ್ಡೆ, ಕಳತ್ತೂರು ಗ್ರಾಮ, ಕಾಪು ತಾಲೂಕು ನಿವಾಸಿಯಾಗಿದ್ದು, ಈತನ ವಿರುದ್ಧ ಒಟ್ಟು 5 ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಶಿರ್ವ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದೆ.
ಮಲ್ಪೆ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ (ತಂದೆ: ಸುನೇತ್ರ ಹೆಚ್), ಆಶೀರ್ವಾದ ಮನೆ, ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ, ಕೊಡವೂರು ಗ್ರಾಮ, ಮಲ್ಪೆ ನಿವಾಸಿಯಾಗಿದ್ದು, ಈತನ ವಿರುದ್ಧ 4 ಪ್ರಕರಣಗಳು ದಾಖಲಾಗಿವೆ.
ಯಾವ ಸ್ಥಳಕ್ಕೆ ಗಡಿಪಾರು
ಮಹಮ್ಮದ್ ನೌಫಿಲ್ ಅವರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಸುಹಾನ್ ಪೂಜಾರಿ ಅವರನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.






