ಇತರೆ

ಕುಂದಾಪುರ: ಹೆಮ್ಮಾಡಿಯಲಿ ಸ್ಕೂಟರ್‌ನಲ್ಲಿ ಅಪಾಯಕಾರಿ ವೀಲಿಂಗ್: ಕೇಸ್ ದಾಖಲು

Views: 106

ಕನ್ನಡ ಕರಾವಳಿ ಸುದ್ದಿ: ಬೈಂದೂರು – ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ಹೆಮ್ಮಾಡಿ ಸಮೀಪ ಸ್ಕೂಟರ್ ನ್ನು ಸವಾರ ವೀಲಿಂಗ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲಾಗಿದೆ ಅದನ್ನು ಪರಿಶೀಲಿಸಿ, ಕುಂದಾಪುರ ಸಂಚಾರ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.

ಹೆಲೈಟ್ ಧರಿಸದೇ, ಮಾ.20ರಂದು ಸ್ಕೂಟರ್‌ನಲ್ಲಿ  ಸವಾರ ವೀಲಿಂಗ್ ಮಾಡುತ್ತಾ, ಸಂಚಾರ ನಿಯಮ ಉಲ್ಲಂಘಿಸಿ, ಸಾರ್ವಜನಿಕ ರಸ್ತೆಯಲ್ಲಿ ದುಡುಕಿನಿಂದ ಮತ್ತು ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸಿ ಮಾನವ ಜೀವಕ್ಕೆ ಹಾಗೂ ಇತರರ ಸ್ವತ್ತಿಗೆ ಹಾನಿ ಉಂಟು ಮಾಡುವ ರೀತಿಯಲ್ಲಿ ಅತೀ ವೇಗ ಹಾಗೂ ಅಜಾಗರೂಕತೆಯಿಂದ ನಾನಾ ರೀತಿಯ ಭಂಗಿಗಳಲ್ಲಿ ಸಂಚರಿಸುತ್ತಿದ್ದ. ಇದರಿಂದ ಇತರೆ ಸವಾರರಿಗೆ ತೊಂದರೆಯಾಗುತ್ತಿದೆ.

ಈ ಬಗ್ಗೆ ಸಂಚಾರ ಠಾಣಾ ಎಸ್ ಐ ಸುಧಾ ಪ್ರಭು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!