ಶಿಕ್ಷಣ

ಪತಿ ಮೃತಪಟ್ಟ ಮಾರನೇ ದಿನವೇ ಕರ್ತವ್ಯಕ್ಕೆ ಹಾಜರಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ಶಿಕ್ಷಕಿ 

Views: 133

ಕನ್ನಡ ಕರಾವಳಿ ಸುದ್ದಿ: ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸಮೀಪದ ಜಿ.ಬಿ. ಸರಗೂರು ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಜ್ಯೋತಿ ಅವರ ಪತಿ ಕಿರಣ್ ಕುಮಾರ್  ಮಾರ್ಚ್ 25 ರಂದು ಮೃತಪಟ್ಟರು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗಣಿತ ವಿಷಯದ ಪರೀಕ್ಷೆ ಇದ್ದುದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೋಸ್ಕರ ದುಃಖದ ಮಡುವಿನಲಿದ್ದರೂ ಜ್ಯೋತಿ ಮರುದಿನವೇ ಶಾಲೆಗೆ ಹಾಜರಾಗಿ ಗಣಿತ ವಿಷಯದ ಬಗ್ಗೆ ಮಕ್ಕಳಿಗೆ ಪೂರ್ವ ಸಿದ್ಧತೆ ಮಾಡಿಸಿದ್ದಾರೆ.

ಗಣಿತದಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಬೇಕೆಂಬ ಆಶಯದೊಂದಿಗೆ ತನ್ನ ಪತಿ ಸಾವಿನ ನೋವಿನಲ್ಲೂ ಎಸ್‌ಎಸ್‌ಎಲ್‌ಸಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕರ್ತವ್ಯಕ್ಕೆ ಹಾಜರಾಗಿ ವಿದ್ಯಾರ್ಥಿಗಳಿಗೆ ಗಣಿತ ಮಾರ್ಗದರ್ಶನ ನೀಡಿದರು.

ಪೋಷಕರು, ಸಾರ್ವಜನಿಕರು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಜ್ಯೋತಿ ಅವರ ಕಾರ್ಯಕ್ಕೆ ಗೌರವ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

Related Articles

Back to top button
error: Content is protected !!