ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಪದವಿ ಪ್ರದಾನ ಸಮಾರಂಭ
Views: 122
ಕನ್ನಡ ಕರಾವಳಿ ಸುದ್ದಿ: ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಮಾಂಟೇಸರಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಜೀವಶಾಸ್ತ್ರ ವಿಭಾಗ ಪ್ರಾಧ್ಯಾಪಕಿ ಡಾ.ಸರೋಜಾ.ಎಂ.ರವರು ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಜೀವನದಲ್ಲಿ ಶಿಸ್ತು, ಆತ್ಮವಿಶ್ವಾಸ ಮತ್ತು ಮೌಲ್ಯಗಳು ಬಹು ಮುಖ್ಯ. ವಿದ್ಯಾರ್ಥಿಗಳು ಕಲಿಕೆಯ ಸಂದರ್ಭದಲ್ಲಿ ಇವುಗಳನ್ನು ಅಳವಡಿಸಿಕೊಂಡು ಯಶಸ್ಸಿನ ಹಾದಿಯನ್ನು ತುಳಿಯಬೇಕೆಂದರು.
ಸಭಾಧ್ಯಕ್ಷರಾದ ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ರವರು ಮಾತನಾಡುತ್ತಾ, ಆಧುನಿಕ ಕಾಲದಲ್ಲಿ ವಿದ್ಯಾರ್ಥಿಗಳು ಹೊಸಹೊಸ ವಿಚಾರಗಳತ್ತ ಮುಖ ಮಾಡಿ ಸಮಾಜದಲ್ಲಿ ಸಮರ್ಥರಾಗಿ ಹೆಜ್ಜೆ ಇಡುವಂತಾಗಬೇಕು. ಕಲಿಕೆ ಬದುಕಿನ ಸರ್ವಾಂಗಣ ಅಭಿವೃದ್ಧಿಗೆ ಪೂರಕವಾಗಿರಬೇಕು ಎಂದರು.
.ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ. ಜಿ ವಿದ್ಯಾರ್ಥಿಗಳಿಗೆ ಪ್ರದವಿ ಪ್ರದಾನ ಮಾಡಲಾಯಿತು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನುನೀಡಿ ಎಲ್ಲರನ್ನು ರಂಜಿಸಿದರು..ವಿದ್ಯಾರ್ಥಿಗಳಾದ ಈಶಾನ್ವಿ ಮತ್ತು ತೃಪ್ತಿ ಕಾರ್ಯಕ್ರಮವನ್ನು ನಿರೂಪಿಸಿದ್ದು, ವಿದ್ಯಾರ್ಥಿನಿ ನಕ್ಷತ್ರ ಎಸ್ ಸ್ವಾಗತಿಸಿದರು. ವಿದ್ಯಾರ್ಥಿನಿ ಇಶಾ ಎಸ್ ಶೆಟ್ಟಿ ಅಂತಿಮವಾಗಿ ವಂದಿಸಿದರು.






