ಜನಮನ

ಕುಂದಾಪುರ ತಾಲೂಕಿನಾದ್ಯಂತ ಗುಡುಗು ಮಿಂಚು ಸಹಿತ ಭಾರೀ ಮಳೆ, ಎಪ್ರಿಲ್ 2ರವರೆಗೆ ಮಳೆ ಮುನ್ಸೂಚನೆ 

Views: 39

ಕನ್ನಡ ಕರಾವಳಿ ಸುದ್ದಿ ಶನಿವಾರ ಹಗಲಿನಲ್ಲಿ ಬಿಸಿಲಿನ ಝಳ ಹೆಚ್ಚಾಗಿದ್ದು, ರಾತ್ರಿ ವೇಳೆ ಕುಂದಾಪುರ ತಾಲೂಕಿನಾದ್ಯಂತ  ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಿದೆ.

ಕೋಟೇಶ್ವರ, ಬೀಜಾಡಿ,ತಲ್ಲೂರು, ಬಿದ್ಕಲ್ ಕಟ್ಟೆ, ಹುಣ್ಸೆಮಕ್ಕಿ, ಬಸ್ರೂರು, ಹೊಸಂಗಡಿ,ಅಮಾಸೆಬೈಲು, ತೊಂಬಟ್ಟು, ಬೆಳ್ವೆ, ಪರಿಸರದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾದ ಬಗ್ಗೆ ವರದಿಯಾಗಿದೆ.

ಅಕಾಲಿಕ ಮಳೆಯಿಂದಾಗಿ ಮರಗಳು ವಿದ್ಯುತ್ ಲೈನ್ ಮೇಲೆ ಬಿದ್ದು ವಿದ್ಯುತ್ ಸಂಪರ್ಕ ಕಡಿತವಾಗಿದೆ. ಮರದ ಕೊಂಬೆಗಳು ರಸ್ತೆಗೆ ಬಿದ್ದಿದ್ದರಿಂದ ಸಂಚಾರಕ್ಕೆ ತೊಂದರೆಯಾಗಿದೆ ಅಲ್ಲಲ್ಲಿ ನಡೆಯುತ್ತಿರುವ ಯಕ್ಷಗಾನ, ಗೆಂಡ, ಜಾತ್ರೋತ್ಸವಕ್ಕೆ ಭಾರಿ ತೊಂದರೆಯಾಗಿದೆ.

14 ಜಿಲ್ಲೆಗೆ ಯೆಲ್ಲೋ ಅಲರ್ಟ್

ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆ ವರದಿಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ ಹಾಗೂ ಬೆಂಗಳೂರು ಸೇರಿದಂತೆ ಸುಮಾರು 14 ರಿಂದ 15 ಜಿಲ್ಲೆಗಳಲ್ಲಿ ಏಪ್ರಿಲ್ 2ರವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 30 ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿರುವುದರಿಂದ, ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಸಂಜೆ ಅಥವಾ ರಾತ್ರಿಯ ವೇಳೆಗೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Related Articles

Back to top button
error: Content is protected !!