ದಿಢೀರ್ ನಾಪತ್ತೆಯಾಗಿದ್ದ ಬಾಲಕಿಯ ಶವ ನಗ್ನ ಸ್ಥಿತಿಯಲ್ಲಿ ಪತ್ತೆ.. ಲೈಂಗಿಕ ದೌರ್ಜನ್ಯ ಶಂಕೆ!
Views: 82
ಕನ್ನಡ ಕರಾವಳಿ ಸುದ್ದಿ: ಬೆಂಗಳೂರಿನ ಹೊರವಲಯದಲ್ಲಿ ಕಾಣೆಯಾಗಿದ್ದ ಅಸ್ಸಾಂ ಮೂಲದ ಬಾಲಕಿಯ ಶವ ಶನಿವಾರ(ಮಾ.28) ಬೋಳುಗುಟ್ಟದ ನೀಲಗಿರಿ ತೋಪಿನಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಗುರುವಾರ ಸಂಜೆ ಮನೆ ಬಳಿ ಆಟವಾಡುತ್ತಿದ್ದಂತಹ ಬಾಲಕಿ ದಿಢೀರ್ ಆಗಿ ಕಾಣೆಯಾಗಿದ್ದಳು. ಪೋಷಕರು ಎಲ್ಲಾ ಕಡೆ ಹುಡುಕಾಡಿದರೂ ಮಗು ಪತ್ತೆಯಾಗಿರಲಿಲ್ಲ. ಬಳಿಕ ಶುಕ್ರವಾರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ನೀಡಿದ್ದರು.
ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ, ಪೊಲೀಸರು ಶೋಧ ಕಾರ್ಯ ನಡೆಸಿದಾಗ ಇಂದು ಸಂಜೆ ಬೋಳುಗುಟ್ಟದ ನಿರ್ಜನ ಪ್ರದೇಶದ ನೀಲಗಿರಿ ತೋಪಿನಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಶವವು ಸಂಪೂರ್ಣ ನಗ್ನ ಸ್ಥಿತಿಯಲ್ಲಿದ್ದು, ಕಿರಾತಕರು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಅಷ್ಟೇ ಅಲ್ಲದೆ, ಮಗುವಿನ ಗುರುತು ಪತ್ತೆಯಾಗಬಾರದೆಂಬ ಉದ್ದೇಶಕ್ಕೆ ಮುಖವನ್ನು ಕಲ್ಲಿನಿಂದ ಜಜ್ಜಿ ವಿಕೃತವಾಗಿ ಕೊಲೆ ಮಾಡಿದ್ದಾರೆ
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿ, ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.






