ಶಿರಿಯಾರ: ಸಾಹೇಬ್ರಕಟ್ಟೆ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ
Views: 47
ಕನ್ನಡ ಕರಾವಳಿ ಸುದ್ದಿ: ಶಿರಿಯಾರ ಗ್ರಾಮದ ಸಾಹೇಬರಕಟ್ಟೆಯಲ್ಲಿ ನಡೆಯುತ್ತಿದ್ದ ಮಟ್ಕಾ ಜುಗಾರಿ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಸಾಹೇಬ್ರಕಟ್ಟೆ ಗಣೇಶ ಕಾಂಪ್ಲೇಕ್ಸ್ ಎದುರು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ಆಡುತ್ತಿರುವುದಾಗಿ ಸಿಬ್ಬಂದಿಯವರು ನೀಡಿದ ಖಚಿತ ಮಾಹಿತಿಯ ಮೇರೆಗೆ ಸಿಬ್ಬಂದಿಗಳೊಂದಿಗೆ ಹಾಗೂ ಪಂಚರೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಮರೆಯಲ್ಲಿ ನಿಂತು ನೋಡಿದ್ದಲ್ಲಿ ಸಾರ್ವಜನಿಕರು ಗುಂಪು ಸೇರಿದ್ದು ಓರ್ವ ವ್ಯಕ್ತಿ 00 ರಿಂದ 99 ರೊಳಗೆ ಯಾವುದೇ ನಂಬರ್ ಬಂದರೆ 1 ರೂಪಾಯಿಗೆ 70 ರೂಪಾಯಿ ಕೊಡುವುದಾಗಿ ಹೇಳಿಕೊಂಡು ಸಾರ್ವಜನಿಕರಿಂದ ಹಣವನ್ನು ಪಣವಾಗಿ ಸ್ವೀಕರಿಸಿಕೊಂಡು ಮಟ್ಕಾ ನಂಬ್ರ ಬರೆದು ಕೊಡುತ್ತಿದ್ದು,ಮಟ್ಕಾ ಜುಗಾರಿ ಆಟ ಆಡುತ್ತಿದ್ದುದ್ದನ್ನು ಖಚಿತಪಡಿಸಿಕೊಂಡು ದಾಳಿ ನಡೆಸಿದಾಗ ಸ್ಥಳದಲ್ಲಿದ್ದ ಸಾರ್ವಜನಿಕರು ಓಡಿ ಹೋಗಿದ್ದು ನಿರಂಜನ ಎಂಬವನನ್ನು ವಶಕ್ಕೆ ಪಡೆದು ವಿಚಾರಿಸಲಾಗಿ ತಾನು ರಘು ಹೆಸ್ಕುತ್ತೂರು ಎಂಬವರು ತಿಳಿಸಿದಂತೆ ಮಟ್ಕಾ ಜುಗಾರಿ ಆಟ ಆಡಿಸುತ್ತಿದ್ದು ಇದರಿಂದ ಬಂದ ಹಣವನ್ನು ರಘು ರವರಿಗೆ ನೀಡುತ್ತಿದ್ದು ಆತನು ತನಗೆ ಕಮೀಷನ್ ನೀಡುತ್ತಿರುವುದಾಗಿ ತಿಳಿಸಿರುತ್ತಾನೆ . ನಿರಂಜನ ಲಘು ಸಂಘಟಿತವಾಗಿ ಮಟ್ಕಾ ಜುಗಾರಿ ಆಟ ಆಡಿಸುತ್ತಿದ್ದರಿಂದ ಆತನನ್ನು ಹಾಗೂ ಆತನ ವಶದಲ್ಲಿದ್ದ ಮಟ್ಕಾ ಜುಗಾರಿ ಆಟಕ್ಕೆ ಬಳಸಿದ ಬಾಲ್ ಪೆನ್, ಮಟ್ಕಾ ಚೀಟಿ ನಗದನ್ನು ಸ್ವಾಧೀನಪಡಿಸಿಕೊಂಡಿರುವುದಾಗಿದೆ
ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.






