ಇತರೆ

ನೇಣು ಬಿಗಿದುಕೊಂಡ ಗಂಡನ ಮೃತದೇಹ ನೋಡಿ ಪತ್ನಿ17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Views: 100

ಕನ್ನಡ ಕರಾವಳಿ ಸುದ್ದಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಮೊದಲಿಗೆ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಂಡನ ಮೃತದೇಹ ಕಂಡು ಪತ್ನಿ ಸಹ ಅಪಾರ್ಟ್‌ಮೆಂಟ್‌ನ 17ನೇ ಫ್ಲೋರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಂಡ – ಹೆಂಡತಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಅನೇಕ ಬಾರಿ ಕಲಹಗಳಾಗಿದೆ. ಇಬ್ಬರೂ ಮಾನಸಿಕ ಒತ್ತಡ ಮತ್ತು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಸೋಮವಾರ ಸಹ ಇಬ್ಬರ ನಡುವೆ ಜಗಳ ಆಗಿದೆ. ಬಳಿಕ ಪತ್ನಿ ಇಲ್ಲದಿರುವಾಗ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಜಿಯಾ ಮನೆಗೆ ಬಂದು ಗಂಡನ ಹೆಣ ನೋಡಿ ಆಕೆಯೂ ಸಹ ಅಪಾರ್ಟ್‌ಮೆಂಟ್‌ನ ಮೇಲಿನಿಂದ ಹಾರಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಗ್ಗೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ

Related Articles

Back to top button
error: Content is protected !!