ರಾಜಕೀಯ
ಚಿತ್ರದುರ್ಗ:ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡ ನಿರ್ಜನ ಪ್ರದೇಶದಲ್ಲಿ ಶವವಾಗಿ ಪತ್ತೆ
Views: 25
ಕನ್ನಡ ಕರಾವಳಿ ಸುದ್ದಿ: ಚಿತ್ರದುರ್ಗ ನಗರದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕಾಂಗ್ರೆಸ್ ಮುಖಂಡನ ಶವ ಪತ್ತೆಯಾಗಿದೆ.
ಮೃತರನ್ನು ರಸಗೊಬ್ಬರ ಅಂಗಡಿ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ಶಿವಲಿಂಗಪ್ಪ (50) ಎಂದು ಗುರುತಿಸಲಾಗಿದೆ.
ಮೂರು ದಿನಗಳ ಹಿಂದೆ ಇವರು ನಾಪತ್ತೆಯಾಗಿದ್ದರು. ಇಂದು ಅವರ ಮೃತದೇಹ ಮುಖದ ಗುರುತು ಸಿಗದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಈ ಬಗ್ಗೆ ತನಿಖೆಗೆ ಸಂಬಂಧಿಕರಿಂದ ಆಗ್ರಹ ವ್ಯಕ್ತವಾಗಿದ್ದು, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಿವಲಿಂಗಪ್ಪ ಅವರೊಂದಿಗೆ ವೈರತ್ವ ಹೊಂದಿದ್ದವರು ಹಾಗೂ ಶವ ದೊರೆತ ಸ್ಥಳದ ಆಸುಪಾಸಿನ ಸಿಸಿಟಿವಿ ಫೂಟೇಜ್ಗಳ ಮಾಹಿತಿ ಕಲೆಹಾಕಲಾಗುತ್ತಿದೆ.






