ಶಿಕ್ಷಣ

ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು: ಶೇ.92 ಫಲಿತಾಂಶ ಸಾಧನೆ

Views: 46

ಕನ್ನಡ ಕರಾವಳಿ ಸುದ್ದಿ: ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಉಡುಪಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ ಸಂಸ್ಥೆಯಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಹಿಂದುಳಿದ ಮತ್ತು ಬಡ ವಿದ್ಯಾರ್ಥಿಗಳಿಗೆ ಆಸರೆಯಾಗಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ವಿವಿಧ ಸಂಯೋಜನೆಗಳಿದ್ದು, ಪ್ರತಿ ವರ್ಷವು ಉತ್ತಮ ಫಲಿತಾಂಶವನ್ನು ದಾಖಲಿಸುತ್ತಿದೆ.

2026 ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ- 01 ರಲ್ಲಿ ಒಟ್ಟು 596 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 548 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 92 ಫಲಿತಾಂಶ ಬಂದಿರುತ್ತದೆ. 

142 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 295 ಪ್ರಥಮ ಶ್ರೇಣಿ ಹಾಗೂ 80 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತೀರ್ಣರಾಗಿರುತ್ತಾರೆ.

ಕಲಾ ವಿಭಾಗದ ಆಂಜನೇಯ (556), ದೀಪ್ತಿ (550), ಡಿ.ಅರವಿಂದ ಕುಮಾರ್ (536), ವಾಣಿಜ್ಯ ವಿಭಾಗದಲ್ಲಿ ಶರ್ಮಿಳಾ (590), ರಾಧಿಕಾ (587), ರಕ್ಷಣ್ ಆಚಾರ್ (582) ಹಾಗೂ ವಿಜ್ಞಾನ ವಿಭಾಗದಲ್ಲಿ ಸುಶ್ಮಿತಾ ಮತ್ತು ತುಳಸಿ ಮಂಜುನಾಥ ನಾಯಕ್ (586), ಶ್ರೇಯಾ (584) ಪ್ರಥ್ವಿ ಆರ್ (571) ಅಂಕ ಪಡೆದು ಸಂಸ್ಥೆಗೆ ಕೀರ್ತಿ ತಂದ ವಿದ್ಯಾರ್ಥಿಗಳು.

ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಹಳೆ ವಿದ್ಯಾರ್ಥಿ ಸಂಘ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

Related Articles

Back to top button
error: Content is protected !!