ಇತರೆ
ಕೊಲ್ಲೂರು: ರೌಡಿಶೀಟರ್ ಕಾರ್ತಿಕ್ ಆಚಾರ್ ಗಡಿಪಾರು
Views: 94
ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ತಿಕ್ ಆಚಾರ್ ನನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಇಡೂರು ಕುಂಜಾಡಿ ಗ್ರಾಮ ಹೊಸಿಮನೆ ಕಾರ್ತಿಕ ನಿಲಯದ ಕಾರ್ತಿಕ್ ಆಚಾರ್ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಎ.9ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ. ಈತನ ವಿರುದ್ಧ 4 ಪ್ರಕರಣ ದಾಖಲಾಗಿದ್ದು, ಕೊಲ್ಲೂರು ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿದೆ. ಈತನನ್ನು ಬೆಂಗಳೂರು ಕಮೀಷನರೆಟ್ ವ್ಯಾಪ್ತಿಯ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.






