ಆಯ್ಕೆಯಾದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಬ: ಬೃಹತ್ ಪ್ರತಿಭಟನೆಯ ಎಚ್ಚರಿಕೆ

Views: 0
ಶಿಕ್ಷಕ ವೃತ್ತಿಗೆ ಆಯ್ಕೆಯಾಗಿ ವರ್ಷ ಕಳೆದರೂ ಸ್ಥಳ ನಿಯುಕ್ತಿ ಮಾಡದೆ, ಆದೇಶ ಪ್ರತಿ ನೀಡದೆ, ಶಿಕ್ಷಣ ಇಲಾಖೆಯು ಸತಾಯಿಸಲಾಗುತ್ತಿದೆ ಕೂಡಲೇ ಕೌನ್ಸೆಲಿಂಗ್ ನಡೆಸಿ ಕೆಲಸಕ್ಕೆ ಕಳುಹಿಸಬೇಕು ಎಂದು ಒತ್ತಾಯಿಸಿ ಜೂನ್ 3 ರಂದು ಸಾವಿರಾರು ಭಾವೀ ಶಿಕ್ಷಕರು ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಆರಂಭಿಸಿದ್ದರು. ಆದರೂ ನಮ್ಮ ಗೋಳು ಕೇಳುವವರಿಲ್ಲ, ಇದೀಗ ಮತ್ತೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ 2022 22ರ ಮಾರ್ಚ್ ನಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅರ್ಜಿ ಕರೆಯಲಾಯಿತು. 70 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಮೇ ತಿಂಗಳಲ್ಲಿ ಪರೀಕ್ಷೆ ನಡೆಸಲಾಯಿತು. 13,351 ಅಭ್ಯರ್ಥಿಗಳು ಆಯ್ಕೆಯಾಗಿರುತ್ತಾರೆ. ನವೆಂಬರ್ ನಲ್ಲಿ 1:2 ಮತ್ತು 1:1 ಆಧಾರದಲ್ಲಿ 13,353 ಶಿಕ್ಷಕರನ್ನು ಆಯ್ಕೆ ಮಾಡಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಮಾಡಲಾಯಿತು. ಆಯ್ಕೆಯಾದ ಭಾವೀ ಶಿಕ್ಷಕರು ತಮ್ಮ ಆಸೆ ನೆರವೇರಿತು ಎಂದು ಸಂಭ್ರಮಿಸಿದ್ದರು. ಆದರೆ ಪಟ್ಟಿ ಪ್ರಕಟವಾಗಿ 9 ತಿಂಗಳಾಗುತ್ತಾ ಬಂದರೂ ಅವರಿಗೆ ಇದುವರೆಗೂ ಸ್ಥಳ ನಿಯುಕ್ತಿ ಮತ್ತು ನೇಮಕಾತಿ ಆದೇಶ ಸಿಕ್ಕಿಲ್ಲ ಎಂದು ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
ಆದಷ್ಟು ಬೇಗ ನಮ್ಮ ಸಮಸ್ಯೆಯನ್ನು ಬಗೆಹರಿಸಿ ನೇಮಕಾತಿ ಪೂರ್ಣಗೊಳಿಸಬೇಕು ಹೀಗೆ ವಿಳಂಬವಾದಲ್ಲಿ ಮತ್ತೊಮ್ಮೆ ದೊಡ್ಡಮಟ್ಟದ ಸಂಘಟಿತ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಶಿಕ್ಷಣ ಇಲಾಖೆಯನ್ನು ಭಾವೀ ಶಿಕ್ಷಕರು ಅಗ್ರಹಿಸಿದ್ದಾರೆ.