ಇತರೆ
ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರು

Views: 0
ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿ ಬಳಿ ವಿ.ಸಿ ನಾಲೆಗೆ ಕಾರು ಸಮೇತ ಬಿದ್ದು ಚಾಲಕ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ಮೋಹನ್ ಎಂಬುವವರಿಗೆ ಸೇರಿದ ಸ್ವಿಫ್ಟ್ ಕಾರು 18 ಅಡಿ ಆಳದ ನಾಲೆಗೆ ಕಾರು ಬಿದ್ದಿದೆ. ವಿಪರೀತವಾಗಿ ಸುರಿಯುತ್ತಿರುವ ಮಳೆಗೆ ಚಾಲಕ ತನ್ನ ನಿಯಂತ್ರಣ ಕಳೆದುಕೊಂಡು ಹರಿಯುತ್ತಿರುವ ನೀರಿಗೆ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಮುಳುಗು ತಜ್ಞರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಚಾಲಕನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ






