16 ಜಿಲ್ಲೆಗಳಿಗೆ ಬಿಸಿ ಗಾಳಿಯ ‘ಯೆಲ್ಲೋ ಅಲರ್ಟ್’ ಘೋಷಣೆ, ಗುಡುಗು-ಸಿಡಿಲು ಸಹಿತ ಗಾಳಿ ಮಳೆ
Views: 150
ಕನ್ನಡ ಕರಾವಳಿ ಸುದ್ದಿ : ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಹವಾಮಾನ ಇಲಾಖೆಯು ಎ.16ರಿಂದ ಐದು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳು ಸೇರಿ 16 ಜಿಲ್ಲೆಗಳಿಗೆ ಬಿಸಿ ಗಾಳಿಯ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಿದೆ.
ಎ.16 ರಿಂದ ಎ.20ರ ವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.
ಈ ಕುರಿತು ಭಾರತೀಯ ಹವಾಮಾನ ಕೇಂದ್ರ (ಐಎಂಡಿ) ನೀಡಿರುವ ಮಾಹಿತಿ ಆಧರಿಸಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ, ‘ಬಿಸಿ ಗಾಳಿಯ ಅಲೆಯ ನಡುವೆ ಏಪ್ರಿಲ್ 19ರವರೆಗೆ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ‘ ಎಂದು ತಿಳಿಸಿದೆ.






