ಸಾಂಸ್ಕೃತಿಕ

ಮಹೇಶ್ ಶೆಟ್ಟಿ ತಿಮರೋಡಿ ಕರೆ ಮಾಡಿ ನಿಂದನೆ: ಯಕ್ಷಗಾನ ಕಲಾವಿದರಿಂದ ದೂರು

Views: 33

ಕನ್ನಡ ಕರಾವಳಿ ಸುದ್ದಿ: ಸ್ಥಳೀಯ ವಾಹಿನಿಯೊಂದರ ಯಕ್ಷ ತೆಲಿಕೆ ಕಾರ್ಯಕ್ರಮ ಸರಣಿಯಲ್ಲಿ ಪ್ರಸಾರವಾದ ‘ಬುರುಡೆ ಗ್ಯಾಂಗ್’ ಎಂಬ ಯಕ್ಷ ಪ್ರಹಸನಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿ ಮಾತನಾಡಿದ್ದಾರೆ.

ಅತ್ಯಂತ ಕೀಳುಮಟ್ಟದ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿದ್ದಾರೆ. ಅಲ್ಲದೆ, ಮಹಿಳೆಯ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸದ್ಯ ತಿಮರೋಡಿ ಅವರು ಅಸಭ್ಯವಾಗಿ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಅವರ ವಿರುದ್ಧ ಈಗಾಗಲೇ ಪುತ್ತೂರು ಗ್ರಾಮಾಂತರ ಠಾಣೆಗೆ ಮತ್ತು ಮಹಿಳಾ ಠಾಣೆಗೆ ದೂರು ನೀಡಲಾಗಿದೆ ಎಂದು ಯಕ್ಷಗಾನ ಕಲಾವಿದರಾದ ಸುಂದರ ರೈ ಮಂದಾರ, ಪ್ರಜ್ವಲ್ ಕುಮಾರ್ ಮತ್ತು ದಿನೇಶ್ ಕೊಡಪದವು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸುಂದರ ರೈ ಮಂದಾರ ಮಾತನಾಡಿ, ಈ ಕಾರ್ಯಕ್ರಮ ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಪ್ರಸಾರವಾಗಿತ್ತು. ಇತ್ತೀಚೆಗೆ ಮಹೇಶ್ ಶೆಟ್ಟಿ ತಿಮರೋಡಿ ಎಂಬವರು ಕಲಾವಿದ ಪ್ರಜ್ವಲ್ ಕುಮಾರ್ ಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾರೆ. ತಾಯಿಯ ಬಗ್ಗೆಯೂ ಕೆಟ್ಟದಾಗಿ ಮಾತನಾಡಿದ್ದಾರೆ ಎಂದರು.

ಪ್ರಜ್ವಲ್ ಕುಮಾ‌ರ್ ಮಾತನಾಡಿ, ನಾವು ಮಾಡಿರುವ ಪ್ರಸಹನಕ್ಕೂ ಇಲ್ಲಿನ ಹೋರಾಟಗಳಿಗೂ ಯಾವುದೇ ಸಂಬಂಧವಿಲ್ಲ ಎಂದರು.

ದಿನೇಶ್ ಕೊಡಪದವು ಮಾತನಾಡಿ, ‘ಬುರುಡೆ ಗ್ಯಾಂಗ್’ ಎಂದರೆ ಅವರಿಗೆ ಕೋಪ ಬರುತ್ತದೆ ಎಂದಾದರೆ ಅವರು ಗ್ಯಾಂಗ್ ನ ಸದಸ್ಯರೆಂದೇ ಅರ್ಥಮಾಡಿಕೊಳ್ಳಬೇಕಾಗುತ್ತದೆ ಎಂದರು.

ಭಾಗವತರಾದ ಧೀರಜ್ ರೈ ಸಂಪಾಜೆ ಉಪಸ್ಥಿತರಿದ್ದರು.

Related Articles

Back to top button
error: Content is protected !!