ಇತರೆ

ಕಾಶ್ಮೀರದ ಉಧಂಪುರದಲ್ಲಿ ಕಂದಕಕ್ಕೆ ಉರುಳಿದ ಸಾರಿಗೆ ಬಸ್‌: 15 ಮಂದಿ ಸ್ಥಳದಲ್ಲೇ ಸಾವು 

Views: 17

ಕನ್ನಡ ಕರಾವಳಿ ಸುದ್ದಿ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸಾರಿಗೆ ಬಸ್‌ ಕಂದಕಕ್ಕೆ ಉರುಳಿದ ಪರಿಣಾಮ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಮನಗರದ ಕಗೋರ್ಟ್ ಗ್ರಾಮದ ಬಳಿ ಬಸ್ ತಿರುವಿನಲ್ಲಿ ಸಾಗುತ್ತಿದ್ದಾಗ ಅವಘಡ ಸಂಭವಿಸಿದೆ. ಅಪಘಾತ ನಡೆದ ಕೂಡಲೇ ಸ್ಥಳೀಯರು ಸೇರಿದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದಿದ್ದಾರೆ.

ಬಸ್ ಉಧಂಪುರಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇದುವರೆಗೆ 15 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಗೊಂಡ 20 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಅಪಘಾತ ಕುರಿತು ಉಧಂಪುರ ಜಿಲ್ಲಾಧಿಕಾರಿ ಮಿಂಗಾ ಶೇರ್ಪಾ ಅವರೊಂದಿಗೆ ಚರ್ಚಿಸಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಏರ್‌ಲಿಫ್ಟ್ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

Related Articles

Back to top button
error: Content is protected !!