ರಾಜಕೀಯ
ಉಡುಪಿ ಶೌಚಾಲಯ ಪ್ರಕರಣ ಮುಚ್ಚಿಹಾಕಲು ಯತ್ನ :ಕೋಟ ಶ್ರೀನಿವಾಸ ಪೂಜಾರಿ

Views: 0
ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದ ಪ್ರಕರಣ ಮುಚ್ಚಿ ಹಾಕಲು ಸರಕಾರ ಮುಂದಾಗಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.
ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಈ ಪ್ರಕರಣದ ತನಿಖೆಯನ್ನು ಸಿಐಡಿ ಅಥವಾ ಡಿಐಜಿ ಮಟ್ಟದ ಮಹಿಳಾ ಪೊಲೀಸ್ ಅಧಿಕಾರಿಯಿಂದ ತನಿಖೆ ಮಾಡಬೇಕಿತ್ತು .ಆದರೆ ಇದನ್ನು ಮುಚ್ಚಿ ಹಾಕಲು ಪ್ರಯತ್ನ ರಾಜ್ಯ ಸರ್ಕಾರ ಮಾಡುತ್ತಿದೆ.
ಈ ಪ್ರಕರಣವನ್ನು ಸಿಐಡಿಗೆ ಕೊಟ್ಟು ಕೂಲಂಕುಶವಾಗಿ ತನಿಖೆ ಮಾಡಿಸಿ, ಆರೋಪಿಗಳನ್ನು ಸಮಗ್ರ ತನಿಖೆ ನಡೆಸಬೇಕು ಇದರ ಹಿಂದೆ ಇರುವ ಜಾಲ ಭಯೋತ್ಪಾದನೆ ತಂಡದ ಸಾಧ್ಯತೆ ಅಥವಾ ಲವ್ ಜಿಹಾದ್ ಪ್ರಕರಣ ಸಾಧ್ಯತೆ ಕುರಿತು ಪರಿಶೀಲನೆ ನಡೆಸಬೇಕಿದೆ ಎಂದು ಹೇಳಿದರು.
ಪ್ರತ್ಯೇಕ ತಂಡ ರಚಿಸಿ ತನಿಖೆಗೆ ಆದೇಶ ಕೊಡಬೇಕು ಆದರೆ ಇದರ ಬದಲಾಗಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳನ್ನು ಮತ್ತು ಯುವಕರ ಮೇಲೆ ಕೇಸು ಹಾಕುವ ಪರಂಪರೆ ಗ್ರಹ ಇಲಾಖೆ ಹೊರಟಿದೆ. ಸಮಗ್ರ ತನಿಖೆಗಾಗಿ ಪ್ರಕರಣವನ್ನು ಎನ್ಐಗೆ ವಹಿಸಬೇಕು ಎಂದರು.






