ಇತರೆ
ಜೋಕಾಲಿ ಕುಣಿಕೆಗೆ ಸಿಲುಕಿ ಬಾಲಕಿ ಸಾವು
Views: 63
ಕನ್ನಡ ಕರಾವಳಿ ಸುದ್ದಿ: ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಪ್ರಣಮ್ಯ ತನ್ನ ಚಿಕ್ಕಮ್ಮನ ಮನೆ ಲಕ್ಕಿನಕೊಪ್ಪಕ್ಕೆ ಬಂದಿದ್ದಳು. ಚಿಕ್ಕಮ್ಮನ ಮಕ್ಕಳು ಕೀಟಲೆ ಕೊಡುತ್ತಿದ್ದ ಕಾರಣ ಪ್ರಣಮ್ಯ ಒಬ್ಬಳೇ ಕೋಣೆಯಲ್ಲಿ ಬಾಗಿಲು ಹಾಕಿಕೊಂಡು ಪಂಚೆ ಬಳಸಿ ಜೋಕಾಲಿ ಮಾಡಿಕೊಂಡು ಆಟವಾಡುತ್ತಿದ್ದಳು. ಈ ವೇಳೆ ಜೋಕಾಲಿ ಕುಣಿಕೆ ಕುತ್ತಿಗೆಗೆ ಬಿಗಿದು ಬಾಲಕಿ ಸಾವನ್ನಪ್ಪಿದ್ದಾಳೆ.
ಆಟವಾಡುವ ಸಂದರ್ಭದಲ್ಲಿ ಪಂಚೆಯ ಕುಣಿಕೆ ಕುತ್ತಿಗೆಗೆ ಬಿಗಿದುಕೊಂಡ ಪರಿಣಾಮ ಉಸಿರಾಟಕ್ಕೆ ಅಡಚಣೆ ಉಂಟಾಗಿ ಪ್ರಣಮ್ಯ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ. ಕುಟುಂಬದವರು ಬಾಗಿಲು ತೆರೆಯುವಷ್ಟರಲ್ಲಿ ಬಾಲಕಿ ಮೃತಪಟ್ಟಿದ್ದಳು.
ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆಯ ಸುತ್ತಮುತ್ತಿನ ಪರಿಸ್ಥಿತಿಗಳನ್ನು ಪರಿಶೀಲಿಸುತ್ತಿದ್ದಾರೆ.






