ಶಿಕ್ಷಣ

SSLC ಫಲಿತಾಂಶದಲ್ಲಿ ರಾಜ್ಯ ಮಟ್ಟದ ರ‍್ಯಾಂಕ್ ಗಳಿಸಿ ಸಂಚಲನ ಮೂಡಿಸಿದ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್

Views: 40

ಕನ್ನಡ ಕರಾವಳಿ ಸುದ್ದಿ: 2025-2026 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗಣೇಶ್ ಮೊಗವೀರ ರ ನೇತ್ರತ್ವದ ಹೊಸ ಆಡಳಿತ ಮಂಡಳಿಯ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಪರಿಪೂರ್ಣ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು ರಾಜ್ಯ ಮಟ್ಟ ರ‍್ಯಾಂಕ್ ಹಾಗೂ 100% ಫಲಿತಾಂಶದೊಂದಿಗೆ ಬೈಂದೂರು ತಾಲ್ಲೂಕಿನಲ್ಲೇ ಪ್ರಶಂಸೆಗೆ ಪಾತ್ರವಾಗಿದೆ 

ವಿದ್ಯಾರ್ಥಿಗಳಾದ ಸಮೃದ್ಧಿ ಸಿ ಖಾರ್ವಿ(616/625) ಹಾಗೂ ಪಂಚಮಿ(616/625) ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 10ನೇ ರ‍್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ 

ಪರೀಕ್ಷೆಗೆ ಹಾಜರಾದ 68 ವಿದ್ಯಾರ್ಥಿಗಳಲ್ಲಿ ಹಾಗೆಯೇ 25 ವಿದ್ಯಾರ್ಥಿಗಳು ವಿಶೇಷ ಶ್ರೇಣಿ, 41 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯನ್ನು ಹೊಂದಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಶ್ರೀ ಗಣೇಶ ಮೊಗವೀರರು ಹಾಗೂ ಕಾರ್ಯದರ್ಶಿಯಾಗಿರುವ ಶ್ರೀಮತಿ ಶ್ಯಾಮಲಾ ಗಣೇಶ್ ಮೋಗವೀರರು ಮತ್ತು ಬೋಧಕ, ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Related Articles

Back to top button
error: Content is protected !!