ಶಿಕ್ಷಣ

ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್: ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ , ವಿಶಿಷ್ಟ ಶ್ರೇಣಿ 50, 32 ಪ್ರಥಮ ಶ್ರೇಣಿಯೊಂದಿಗೆ 100% ಫಲಿತಾಂಶ

Views: 10

ಕನ್ನಡ ಕರಾವಳಿ ಸುದ್ದಿ: ಶಂಕರನಾರಾಯಣದ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನಲ್ಲಿ ಶೇ 100 ಫಲಿತಾಂಶ ರಾಜ್ಯಕ್ಕೆ ಪ್ರಥಮ 625ಕ್ಕೆ 625 ಅಂಕ ಗಳಿಸದರೊಂದಿಗೆ ರಾಜ್ಯ ಕ್ಕೆ ಪ್ರಥಮ ರ್ಯಂಕ್ ನೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ.

ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನ 83 ವಿದ್ಯಾರ್ಥಿಗಳು ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿ ಎಲ್ಲರೂ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 50ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ , ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತೀರ್ಣರಾಗಿ ಶಾಲೆಯ ಗರಿಮೆಯನ್ನು ಉತ್ತುಂಗಕ್ಕೇರಿಸಿದ್ದಾರೆ.

ಪ್ರೀತಮ್ ಜಿ ಪೂಜಾರಿ

625 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ತಂದುಕೊಟ್ಟಿದ್ದು, ರಾಜ್ಯಕ್ಕೆ ಮೊದಲ ರ್ಯಂಕ್ ನ್ನು ಗಳಿಸಿ ಶಾಲೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ.

ನಂದಶ್ರೀ ಶೆಟ್ಟಿ ಮತ್ತು ಗ್ರೀಷ್ಮ ಜಿ . 616ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದು, ಯುಕ್ತ ಎಂ ಶೆಟ್ಟಿ ಮತ್ತು ಶರ್ವಾಣಿ ಉಪ್ಪುರ್ 610 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ವಿನೂತನ ಕಾರ್ಯಯೋಜನೆಗಳು, ಮತ್ತು ಶಿಕ್ಷಕರ ಮಾರ್ಗದರ್ಶನ, ಶ್ರಮ ಹಾಗೂ ನಿರಂತರ ಅಭ್ಯಾಸ ಪ್ರಮುಖ ಕಾರಣವಾಗಿದ್ದು, ಶಾಲೆಯ ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯಾಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related Articles

Back to top button
error: Content is protected !!