ಇಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ.. ಎಲ್ಲೆಲ್ಲಿ ಗೊತ್ತಾ?..10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ !
Views: 164
ಕನ್ನಡ ಕರಾವಳಿ ಸುದ್ದಿ: ಕರ್ನಾಟಕದಲ್ಲಿ ಬಿರು ಬೇಸಿಗೆಯ ಮಧ್ಯೆ ಮಳೆ ಆರ್ಭಟ ಕೂಡ ಜೋರಾಗಿದೆ. ರಾಜ್ಯದ ಜನತೆಗೆ ಹವಾಮಾನ ಇಲಾಖೆ ತಂಪನೆಯ ಸುದ್ದಿ ನೀಡಿದ್ದು, ಇಂದು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗುಡುಗು ಸಹಿತ ಮಿಂಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತೀವ್ರತೆ ವಿಪರೀತವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಬೀದರ್‌ನಲ್ಲಿ ತಾಪಮಾನ 44-45°C ಡಿಗ್ರಿ ಸೆಲ್ಸಿಯಸ್ ತಲುಪಿದೆ. ಬೆಂಗಳೂರಿನಲ್ಲಿ 32°Cಗಿಂತ ಹೆಚ್ಚಿನ ತಾಪಮಾನ ದಾಖಲಾಗುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಲಾಗಿದ್ದು, ಮಧ್ಯಾಹ್ನ ಹೊರಗೆ ಬಾರದಂತೆ ಸೂಚಿಸಲಾಗಿದೆ. ಪ್ರತಿದಿನ ಮೈ ಕೊರೆಯುವ ಬಿಸಿಲಿನ ತಾಪಕ್ಕೆ ಜನರು ಹೈರಾಣಾಗಿದ್ದು, ಒಂದು ಸಲನಾದರೂ ಮಳೆ ಬರಬಾರದ ಅಂತ ದೇವರ ಮೊರೆ ಹೋಗುವಂತಾಗಿದೆ.
ಬಿರು ಬೇಸಿಗೆ ನಡುವೆ ಹವಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದ್ದು, ಜನರು ಸಂತಸ ಪಟ್ಟಿದ್ದಾರೆ. ಮಲೆನಾಡು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗಲಿದ್ದು, ನಾಳೆ (ಏ.25) ಭಾರೀ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮಲೆನಾಡು ಭಾಗಗಳಾದ ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಇತ್ತ ಬೆಳಗಾವಿ, ಧಾರವಾಡ, ಗದಗ , ಹಾವೇರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗಿಲಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಹಗುರ ಮಳೆ ಸಾಧ್ಯತೆ ಇದೆ. ನಾಳೆ ಸಹ ರಾಜ್ಯದ ಈ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಕೆಲವು ಪ್ರದೇಶಗಲ್ಲಿ ಒಣಹವೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಮಂಗಳೂರು ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸದ್ಯ ಹವಾಮಾನ ಇಲಾಖೆ ಕೆಲವು ಜಿಲ್ಲೆಗೆ ಮಳೆಯ ಸೂಚನೆ ನೀಡಿದ್ದು, ಬಿಸಿಲಿನ ಬೇಗೆಗೆ ಬೆಂದು ಹೋಗಿದ್ದ ಮಂದಿಯ ಮುಖದಲ್ಲಿ ಬಾರೀ ಮಂದಹಾಸ ಮೂಡಿದೆ.
ಕರ್ನಾಟಕದ ಜೊತೆಗೆ ಪಕ್ಕದ ರಾಜ್ಯದ ವಾದ ದಕ್ಷಿಣ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕಡಿಮೆ ಮಟ್ಟದ ಪರಿಚಲನೆಯಿಂದಾಗಿ, ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ 5 ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇಂದಿನಿಂದ 28 ರವರೆಗೆ ಪಶ್ಚಿಮ ಘಟ್ಟದ ಜಿಲ್ಲೆಗಳು ಮತ್ತು ದಕ್ಷಿಣ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಏಪ್ರಿಲ್ 29 ಮತ್ತು ಏಪ್ರಿಲ್ 30 ರಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.






