ಇತರೆ

ತಾಯಿ ಜತೆ ನಗುನಗುತ್ತಾ ಮಾತನಾಡುತ್ತಿರುವಾಗಲೇ ಬ್ರೌನ್ ಸ್ಟೋಕ್‌ಗೆ ಬಲಿಯಾದ ಯುವತಿ

Views: 134

ಕನ್ನಡ ಕರಾವಳಿ ಸುದ್ದಿ: ತಾಯಿ ಜತೆ ಮಾತನಾಡುತ್ತಿದ್ದ ಯುವತಿಗೆ ಏಕಾಏಕಿ ಬೈನ್ ಸ್ಟೋಕ್ ಸಂಭವಿಸಿ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಶ್ವೇತಾ(25) ಮೃತಪಟ್ಟ ಯುವತಿ. ಈಕೆ ಏ.25ರ ಶನಿವಾರ ಕೆಲಸ ಮುಗಿಸಿ ಮನೆಗೆ ಬಂದು, ತಾಯಿ ಜತೆ ನಗುನಗುತ್ತಾ ಮಾತನಾಡುತ್ತಿರುವಾಗಲೇ ಏಕಾಏಕಿ ಕುಸಿದು ಬಿದ್ದು ಮಾತನಾಡಲಾರದ ಸ್ಥಿತಿಗೆ ತಲುಪಿದ್ದರು. ತಕ್ಷಣ ಆಕೆಯನ್ನು ಬೆಂಗಳೂರಿಗೆ ಕರೆತರುವಾಗಲೇ ಶ್ವೇತಾ ಕೋಮಾಗೆ ಜಾರಿದ್ದರು. ಆದರೆ ಬೈನ್ ನಿಷ್ಕ್ರಿಯಗೊಂಡಿದ್ದರಿಂದ ಹೆತ್ತವರು ಈ ದುಃಖದ ಮಧ್ಯೆಯೇ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದರು.

ದುರದೃಷ್ಟವಶಾತ್, ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೇ ಶ್ವೇತಾ ಮೃತಪಟ್ಟಿದ್ದಾರೆ. ಹೀಗಾಗಿ ಆಂಗಾಂಗ ದಾನ ನಡೆಸಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಒಬ್ಬಳೇ ಮಗಳನ್ನು ಕಳೆದುಕೊಂಡ ಹೆತ್ತವರು ಕಂಗಾಲಾಗಿದ್ದಾರೆ. ಸದ್ಯ ಶ್ವೇತಾ ಮೃತದೇಹವನ್ನು ಹಾಸನಕ್ಕೆ ಸ್ಥಳಾಂತರಿಸಲಾಯಿತು.

 

Related Articles

Back to top button
error: Content is protected !!