ಇತರೆ

ಉದ್ಯೋಗ ಕೊಡಿಸುವ ನೆಪದಲ್ಲಿ ನಿರುದ್ಯೋಗಿ ಯುವತಿಯರನ್ನೇ ಟಾರ್ಗೆಟ್ ಮಾಡಿ ವೇಶ್ಯಾವಾಟಿಕೆ:11 ಆರೋಪಿಗಳು ಅರೆಸ್ಟ್

Views: 114

ಕನ್ನಡ ಕರಾವಳಿ ಸುದ್ದಿ: ಉದ್ಯೋಗ ಕೊಡಿಸುವ ನೆಪದಲ್ಲಿ ನಿರುದ್ಯೋಗಿ ಯುವತಿಯರನ್ನೇ ಟಾರ್ಗೆಟ್ ಮಾಡಿ ವೇಶ್ಯಾವಾಟಿಕೆ ದಂಧೆಗೆ ಇಳಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹಿರೇಕೊಟ್ನೆಕಲ್ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಕಿಂಗ್‌ಪಿನ್ ತಾಯಪ್ಪ ಸೇರಿದಂತೆ ಒಟ್ಟು 11 ಜನರನ್ನು ಬಂಧಿಸಿದ್ದಾರೆ.

ಮಾನ್ವಿ ಪಟ್ಟಣದ ಇಂದಿರಾನಗರದ ನಿವಾಸಿಯಾದ ತಾಯಪ್ಪ ಈ ದಂಧೆಯ ಮಾಸ್ಟರ್ ಮೈಂಡ್. ಆಂಧ್ರಪ್ರದೇಶ, ತೆಲಂಗಾಣ, ಬೆಳಗಾವಿ ಹಾಗೂ ಮಹಾರಾಷ್ಟ್ರದ ನಿರುದ್ಯೋಗಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವರಿಗೆ ಉದ್ಯೋಗ ಕೊಡುವುದಾಗಿ ಹೇಳಿ ನಂಬಿಸಿ ಕರೆತಂದು, ನಂತರ ಬಲವಂತವಾಗಿ ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದ.

ಹಿರೇಕೊಟ್ನೆಕಲ್ ಗ್ರಾಮದ ಹೊರವಲಯದ ಜಮೀನುಗಳನ್ನು ಈ ಅಕ್ರಮ ಚಟುವಟಿಕೆಗೆ ಅಡ್ಡೆಯನ್ನಾಗಿ ಮಾಡಿಕೊಳ್ಳಲಾಗಿತ್ತು ಎಂದು ತಿಳಿದು ಬಂದಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಾನ್ವಿ ಪೊಲೀಸರು ಜಮೀನಿನ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಕಿಂಗ್‌ಪಿನ್ ತಾಯಪ್ಪ, ಅಮರೇಶ್, ಹುಸೇನಪ್ಪ, ಪ್ರಕಾಶ್, ಆದೇಶ್, ವಿಜಯಕುಮಾರ್, ಶರಣಬಸವ ಹಾಗೂ ಮಲ್ಲಿಕಾರ್ಜುನ ಸೇರಿದಂತೆ 11 ಮಂದಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯ ಸಮಯದಲ್ಲಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಲಾಗಿದ್ದು, ಅವರನ್ನು ಸಾಂತ್ವನ ಕೇಂದ್ರಕ್ಕೆ ರವಾನಿಸಲಾಗಿದೆ.

Related Articles

Back to top button
error: Content is protected !!