ಜನಮನ
ಪಟಾಕಿ ಗೋದಾಮಿನಲ್ಲಿ ಹಠಾತ್ ಸ್ಪೋಟ 8 ಮಂದಿ ಸಾವು, ಹಲವರಿಗೆ ಗಾಯ

Views: 0
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಳೆಯಪೇಟೈ ಪಟಾಕಿ ತಯಾರಿಕಾ ಘಟಕದ ಗೋದಾಮಿನಲ್ಲಿ ಹಠಾತ್ ಸ್ಫೋಟಗೊಂಡು ಸಂಭವಿಸಿದ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸ್ಪೋಟ ತೀವ್ರತೆಗೆ ಸಮೀಪದ ಮನೆಗಳು ಮತ್ತು ಅಂಗಡಿಗಳಿಗೆ ಹಾನಿಯಾಗಿದೆ ಎಂದು ತಿಳಿಯಲಾಗಿದೆ.
ಪೊಲೀಸರು ಅಗ್ನಿಶಾಮಕ ಮತ್ತು ರಕ್ಷಣಾ ಪಡೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.
ಸ್ಪೋಟಕ್ಕೆ ನಿಖರವಾದ ಕಾರಣ ತಿಳಿಯಬೇಕಾಗಿದೆ.
ಪಟಾಕಿ ಸ್ಫೋಟಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಮತ್ತು ಗಾಯ ಗೊಂಡವರಿಗೆ ತಲಾ 50,000 ರೂ.ಪರಿಹಾರ ಘೋಷಿಸಿದ್ದಾರೆ.






