ಜನಮನ

ಖಾಸಗಿ ಕ್ಷಣದ ವಿಡಿಯೋ ವೈರಲ್: ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ

Views: 0

ವಿದ್ಯಾರ್ಥಿಗಳಿಬ್ಬರು ಖಾಸಗಿ ಕ್ಷಣಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದರಿಂದ ಮನನೊಂದು ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.

ನಗರದ ಖಾಸಗಿ ಕಾಲೇಜೊಂದರಲ್ಲಿ ಟೆರೇಸ್ ಮೇಲೆ ಪರಸ್ಪರ ಪ್ರೀತಿಸುತ್ತಿದ್ದ ವಿದ್ಯಾರ್ಥಿಗಳಿಬ್ಬರು ಕುಳಿತಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರವಾಗಿತ್ತು.

ಅವರಿಬ್ಬರ ಗಮನಕ್ಕೆ ಬಾರದಂತೆ ಪಕ್ಕದ ಕಟ್ಟಡದಲ್ಲಿ ಸೆರೆಹಿಡಿದಿದ್ದ ವಿಡಿಯೋ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದ ವಿಷಯ ದುರಂತದ ಬಳಿಕ ಬೆಳಕಿಗೆ ಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾದ ವಿಡಿಯೋ ವಿದ್ಯಾರ್ಥಿನಿಯೊಬ್ಬರನ್ನು ವಿಚಲಿತಗೊಳಿಸಿತ್ತು. ಆಕೆ ಈ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ವಿದ್ಯಾರ್ಥಿನಿಯ ಈ ಕೃತ್ಯದಿಂದ ಮನನೊಂದು ವಿದ್ಯಾರ್ಥಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣಾ ಕುಮಾರ್ ತಿಳಿಸಿದ್ದಾರೆ.

Related Articles

Back to top button
error: Content is protected !!