ಜನಮನ

ಚಂಡಮಾರುತದ ಪ್ರಭಾವ: ಮೇ 8ವರೆಗೂ ರಾಜ್ಯಾದ್ಯಂತ ಮಳೆ ಸಾಧ್ಯತೆ

Views: 41

ಕನ್ನಡ ಕರಾವಳಿ ಸುದ್ದಿ: ಚಂಡಮಾರುತದ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ದಕ್ಷಿಣ ಒಡಿಶಾದಿಂದ ತೆಲಂಗಾಣ, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಾದ್ಯಂತ ಮುನ್ನಾರ್ ಕೊಲ್ಲಿಯವರೆಗೆ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ವಾಯುಭಾರ ಗಾಳಿಯ ಪ್ರಭಾವ ಕಡಿಮೆಯಾಗಿದೆ. ಇದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ.

ಮೇ 8ರ ವರೆಗೆ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದೆ. ಕರಾವಳಿಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಇನ್ನು ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದ್ದು, ಮಿಂಚು – ಗುಡುಗು ಸಹಿತ ಧಾರಾಕಾರ ಮಳೆ ಆಗಲಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಕಂಡು ಬಂದಿಲ್ಲ ಎಂದು ಮುನ್ಸೂಚನೆ ನೀಡಿದೆ.

ಪ್ರಸ್ತುತ ವಾತಾವರಣದ ಬದಲಾವಣೆಯನ್ನು ಗಮನಿಸಿದರೆ, ದಕ್ಷಿಣ ಒಡಿಶಾದಿಂದ ತಮಿಳುನಾಡಿನ ಮುನ್ನಾರ್ ಕೊಲ್ಲಿಯವರೆಗೆ ವಾಯುಭಾರ ಕುಸಿತದ ಪ್ರಭಾವ ವಿಸ್ತರಿಸಿದೆ. ಇದರ ಜೊತೆಗೆ ಪಶ್ಚಿಮ ರಾಜಸ್ಥಾನದಿಂದ ಆರಂಭವಾಗಿ ತಮಿಳುನಾಡಿನ ಒಳನಾಡಿನವರೆಗೆ ವ್ಯಾಪಿಸಿರುವ ತಗ್ಗು ಪ್ರದೇಶದ ಗಾಳಿಯ ಚಲನೆಯು ಮಳೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಿದೆ.

ತಾಪಮಾನದ ವಿಚಾರಕ್ಕೆ ಬರುವುದಾದರೆ, ಕಳೆದ 24 ಗಂಟೆಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗಿ ದಾಖಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ತಾಪಮಾನವು 1.5 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆ ಕಂಡಿದೆ. ರಾಜ್ಯದ ಒಟ್ಟಾರೆ ಗರಿಷ್ಠ ತಾಪಮಾನವು 31.5 ಡಿಗ್ರಿ ಸೆಲ್ಸಿಯಸ್‌ನಿಂದ 43.8 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಿದ್ದು, ಬೀದರ್ ಮತ್ತು ಮೈಸೂರಿನಲ್ಲಿ ವಾಡಿಕೆಗಿಂತ ಹೆಚ್ಚಿನ ಬಿಸಿಲು ಕಂಡುಬಂದಿದೆ.

Related Articles

Back to top button
error: Content is protected !!