ಯುವಜನ

ಆಟವಾಡುತ್ತಾ ಬಾತುಕೋಳಿ ಹಿಡಿಯಲು ಹೋದ ನಾಲ್ವರು ಮಕ್ಕಳು ನೀರುಪಾಲು 

Views: 296

ಕನ್ನಡ ಕರಾವಳಿ ಸುದ್ದಿ:ಆಟವಾಡುತ್ತಾ ಬಾತುಕೋಳಿ ಹಿಡಿಯುವುದಕ್ಕೆ ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಧಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ಸೋಮವಾರ ನಡೆದಿದೆ.

ಬಾತುಕೋಳಿ ಹಿಡಿಯಲು ಹೋಗಿ 5-6 ವರ್ಷದ ನಾಲ್ವರು ಮಕ್ಕಳು ನೀರು ಪಾಲಾದ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ.

ಅರಳುಗುಪ್ಪೆ ಗ್ರಾಮದ ಅಬ್ದುಲ್ ರೆಹಮಾನ್ (13), ನಾಯಜ್ (12), ಶಿವಮೊಗ್ಗದ ಮೈದಿಹಾ (9), ಅರಮಾನ್ (8) ಮೃತಪಟ್ಟ ಮಕ್ಕಳು. ಅರಳುಗುಪ್ಪೆಯ 4 ವರ್ಷದ ಅರ್ಮನ್ ಪ್ರಾಣಾಪಾಯದಿಂದ ಪಾರಾಗಿದ್ದು,

ಮಕ್ಕಳೆಲ್ಲ ಬಾತುಕೋಳಿ ಕೆರೆಗೆ ಹೋಯಿತು ಎಂದು ಹಿಡಿಯಲು ಹೋಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆ ಮುಂಭಾಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

.

Related Articles

Back to top button
error: Content is protected !!