ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಮನೆ ಧ್ವಂಸ ಮಾಡಿದ ಸ್ಥಳೀಯ ಆಡಳಿತ

Views: 0
ಮಧ್ಯಪ್ರದೇಶದ 11 ವರ್ಷದ ಬಾಲಕಿಯ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಶುಕ್ರವಾರ ನಡೆದಿದೆ.
ಪಟ್ಟಣದ ಸ್ಥಳೀಯ ಆಡಳಿತವು ಆರೋಪಿಗಳಿಬ್ಬರ ಮನೆಗಳನ್ನು ಧ್ವಂಸಗೊಳಿಸಿದೆ ಎಂದು ತಿಳಿದು ಬಂದಿದೆ.
ರವೀಂದ್ರ ಕುಮಾರ್ ಮತ್ತು ಅತುಲ್ ಬಾಲಕಿಯನ್ನು ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸೆಗಿದ್ದರು. ಅವರನ್ನು ಬಂಧಿಸಿ ನ್ಯಾಯಾಂಗ ಬಂದನ ವಿಧಿಸಲಾಗಿತ್ತು .
ಪ್ರಕರಣದ ತನಿಖೆ ಪೂರ್ಣಗೊಂಡ ನಂತರ ಕ್ರಮ ಕೈಗೊಳ್ಳುವಂತೆ ಆರೋಪಿಗಳ ಕುಟುಂಬಸ್ಥರು ಅಧಿಕಾರಿಗಳನ್ನು ವಿನಂತಿಸಿದರೂ ಅವರ ಮನೆಗಳನ್ನು ಕೆಡವಲಾಗಿದೆ ಎಂದು ತಿಳಿದುಬಂದಿದೆ.
ಏನಿದು ಘಟನೆ? ಗುರುವಾರ ಸಂಜೆ ಬಾಲಕಿ ನಾಪತ್ತೆಯಾಗಿದ್ದು,ತಡ ರಾತ್ರಿಯವರೆಗೂ ಮನೆಗೆ ಬಾರದೆ ಇದ್ದಾಗ ಪೋಷಕರು ಹುಡುಕಾಡಿ ಪೊಲೀಸರಿಗೆ ದೂರು ನೀಡಿದ್ದರು. ಮನೆಯಿಂದ ಒಂದು ಕಿಲೋಮೀಟರ್ ದೂರದ ಕಾಡಿನಲ್ಲಿ ಆಕೆ ಪತ್ತೆಯಾಗಿದ್ದಳು.
ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ತನಿಖೆಯಿಂದ ದೃಢಪಟ್ಟಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಾಲಕೀಯ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಹೆಚ್ಚಿನ ಪರೀಕ್ಷೆಗಾಗಿ ರೇವಾ ವೈದ್ಯಕೀಯ ಕಾಲೇಜಿಗೆ ಶಿಫಾರಸು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.






