ಇತರೆ
ಕೋಟೇಶ್ವರ: ಬೀಜಾಡಿಯಲ್ಲಿ ಬೈಕ್‌ಗೆ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತ್ಯು
Views: 177
ಕನ್ನಡ ಕರಾವಳಿ ಸುದ್ದಿ: ಕೋಟೇಶ್ವರ ಸಮೀಪ ಬೀಜಾಡಿಯಲ್ಲಿ ಬೈಕ್‌ಗೆ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ಬೀಜಾಡಿ ಜಂಕ್ಷನ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹೆಸರೂರು ಗ್ರಾಮದ ಪರಸಪ್ಪ ಚಂದಪ್ಪ ಲಮಾಣಿ (57) ಮೃತ ವ್ಯಕ್ತಿ.
ಉಡುಪಿ ಕಡೆಯಿಂದ ಕುಂದಾಪುರದತ್ತ ಲಾರಿ ಚಲಾಯಿಸುತ್ತಿದ್ದ ಸಿಪಾಯಿ ಶಬ್ಬಿರ ಹುಸೇನ್ ಹಾಜಿ ಇಬ್ರಾಹಿಂ ಅವರ ವಾಹನವನ್ನು ಬೈಕ್ ಸವಾರ ಬಲಗಡೆಯಿಂದ ಓವರ್‌ಟೇಕ್ ಮಾಡಲು ಯತ್ನಿಸಿದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಿಂದಾಗಿ ತೀವ್ರ ಗಾಯಗೊಂಡ ಲಮಾಣಿ ಅವರನ್ನು ಸ್ಥಳೀಯರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು, ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಸೋಮೇಶ ಲಮಾಣಿ ನೀಡಿದ ದೂರಿನಂತೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ






