ಆರೋಗ್ಯ

ಆಸ್ಪತ್ರೆಯ ಡಾಕ್ಟರ್ ಸಾವಿನ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಆಸ್ಪತ್ರೆಯ ನರ್ಸ್ ನೇಣಿಗೆ ಶರಣು

Views: 97

ಕನ್ನಡ ಕರಾವಳಿ ಸುದ್ದಿ: ನವೋದಯ ಆಸ್ಪತ್ರೆಯ ವೈದ್ಯ ಡಾ.ಚೇತನ್ ಟೆಂಕರ್ ಆತ್ಮಹತ್ಯೆಗೆ ಶರಣಾಗಿದ್ದ ಬೆನ್ನಲ್ಲೇ ಇದೀಗ ನರ್ಸ್ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಮಹದೇಶ್ವರ ಬಡವಾಣೆಯಲ್ಲಿ ಈ ಘಟನೆ ನಡೆದಿದೆ. ತಾಲೂಕಿನ ನವೋದಯ ಆಸ್ಪತ್ರೆಯ ನರ್ಸ್ ಸರಸ್ವತಿ (45) ಆತ್ಮಹತ್ಯೆಗೆ ಶರಣಾದವರು.

ಎರಡು ದಿನಗಳ ಹಿಂದೆ ನವೋದಯ ಆಸ್ಪತ್ರೆಯ ವೈದ್ಯ ಡಾ.ಚೇತನ್ ಟೆಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ವೈದೈನ ಸಾವಿನ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಇದೀಗ ಅದೇ ಆಸ್ಪತ್ರೆಯ ನರ್ಸ್ ನೇಣಿಗೆ ಶರಣಾಗಿದ್ದಾರೆ.

ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!