ರಾಜಕೀಯ

ಸಚಿವ ಡಿ ಸುಧಾಕರ್ ಚಿಕಿತ್ಸೆ ಫಲಿಸದೆ ವಿಧಿವಶ

Views: 96

ಕನ್ನಡ ಕರಾವಳಿ ಸುದ್ದಿ: ಹಿರಿಯೂರು ಕ್ಷೇತ್ರದ ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (66) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಸಚಿವ ಡಿ. ಸುಧಾಕರ್ ಅವರು ಇಂದು ಮುಂಜಾನೆ ಸುಮಾರು 3.15ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆ ಅಧಿಕೃತವಾಗಿ ಘೋಷಿಸಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಸುಧಾಕರ್ ಅವರಿಗೆ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು.

ಸಚಿವ ಸುಧಾಕರ್ ಅವರು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಮೊದಲು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ನಂತರ ಅವರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇದರಿಂದಾಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಯಿತು. ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ, ಚೇತರಿಸಿಕೊಳ್ಳಲಾಗದೆ ಅವರು ಮೃತಪಟ್ಟಿದ್ದಾರೆ.

 

Related Articles

Back to top button
error: Content is protected !!